ಬೆಂಗಳೂರು: ಬಿಬಿಎಂಪಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಮತಎಣಿಕೆ ನಡೆಯುವ ಕೇಂದ್ರಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಎಣಿಕೆ ಕೇಂದ್ರಗಳ ಬಳಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿ ದೆ. ಈ ಹಿನ್ನೆಲೆಯಲ್ಲಿ ಸಿಎಆರ್, ಕೆಎಸ್ ಆರ್‍ಪಿ ಸೇರಿದಂತೆ ಒಟ್ಟು 8,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಮತ ಎಣಿಕೆ ಕೇಂದ್ರದ ಬಳಿ ಒಂದರಂತೆ 25 ಸ್ಟ್ಯಾಟಿಕ್ ವೈರ್‍ಲೆಸ್, ಉಸ್ತುವಾರಿಗಾಗಿ ನಗರ ಪೊಲೀಸ್ ಆಯುಕ್ತರು,
ನಾಲ್ವರು ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 16 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ ಎಂದರು. 197 ವಾರ್ಡ್‍ಗಳ ಮತ ಎಣಿಕೆ
ಕೇಂದ್ರಗಳನ್ನು 27 ವಿಧಾನಸಭಾ ಕ್ಷೇತ್ರಗಳಲ್ಲಿ ತೆರೆಯಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಪ್ರತಿ ಸ್ಟ್ರಾಂಗ್ ರೂಂನ ಜವಾಬ್ದಾರಿಯನ್ನು ಎಸಿಪಿಗೆ ನೀಡಲಾಗಿದೆ ಎಂದರು.
ಮೂರು ದಿನ ನಿಷೇಧಾಜ್ಞೆ: ಮತ ಎಣಿಕೆ ವೇಳೆ ಹಾಗೂ ನಂತರದ ದಿನಗಳಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಮಧ್ಯಾಹ್ನ 12 ಗಂಟೆಯವರೆಗೆ, ಮೂರು ದಿನಗಳ ಕಾಲ ನಿಷೇಧಾಜ್ಞೆಜಾರಿಗೊಳಿಸಿ ಆದೇಶಿಸಲಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ಬಂದೋಬಸ್ತ್