ಪಾಕಿಸ್ತಾನ ಸುಪ್ರೀಮ್ ಕೋರ್ಟ್ 
ಪ್ರಧಾನ ಸುದ್ದಿ

ಹಿಂದೂ ದೇವಾಲಯವನ್ನು ಮರುನಿರ್ಮಿಸಿ: ಪಾಕಿಸ್ತಾನ ಅಪೆಕ್ಸ್ ನ್ಯಾಯಾಲಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕರಕ್ ಜಿಲ್ಲೆಯಲ್ಲಿ ಹಿಂದು ದೇವಾಲಯವನ್ನು ಮರುನಿರ್ಮಾಣ ಮಾಡಲು ಖ್ಯಾತ ಕಟ್ಟಡ ವಿನ್ಯಾಸಕಾರನನ್ನು ನೇಮಕ

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕರಕ್ ಜಿಲ್ಲೆಯಲ್ಲಿ ಹಿಂದು ದೇವಾಲಯವನ್ನು ಮರುನಿರ್ಮಾಣ ಮಾಡಲು ಖ್ಯಾತ ಕಟ್ಟಡ ವಿನ್ಯಾಸಕಾರನನ್ನು ನೇಮಕ ಮಾಡುವಂತೆ ಪಾಕಿಸ್ತಾನ ಸುಪ್ರೀಮ್ ಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಾಧೀಶ ಜವ್ವಡ್ ಎಸ್ ಖವಾಜ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ, ಕರಕ್ ಜಿಲ್ಲೆಯ ತೇರಿ ಗ್ರಾಮದಲ್ಲಿ ಶ್ರೀ ಪರಮಹಂಸ್ ಜಿ ಮಹಾರಾಜ್ ಅವರ ಸಮಾಧಿಯನ್ನು ಮರು ನಿರ್ಮಾಣ ಮಾಡಲು ಸಂಬಧ ಪಟ್ಟ ಅಧಿಕಾರಿಗಳು ಚರ್ಚಿಸಿ ಯೋಜನೆ ತಯಾರಿಸುವಂತೆ ಸೂಚಿಸಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ಈ ಆದೇಶವನ್ನು ಯಾವುದೇ ಕಾರಣಕ್ಕೂ ಮೀರದೆ, ಮರು ನಿರ್ಮಾಣ ಕಾರ್ಯ ಜರುಗಲೇಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಹಿಂದಿನ ತೀರ್ಪನ್ನು ಜಾರಿ ಮಾಡಲು ಮರುನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಕಾಂಪೌಂಡ್ ನಿರ್ಮಿಸಲಾಗಿದೆ ಎಂದು ತಿಳಿಸಿ ಕೋರ್ಟ್ ಗೆ ಅದರ ಫೋಟೋಗಳನ್ನು ಜಿಲ್ಲಾಧಿಕಾರಿ ಸಲ್ಲಿಸಿದ್ದಾರೆ.

ಆದರೆ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ನ್ಯಾಯಾಲಯ ಪ್ರಾಂತ್ಯದ ಆಡಳಿತ ಇದಕ್ಕಾಗಿ ಶ್ರಮಿಸುತ್ತಿರುವುದು ಸಾಲದು, ಕೇವಲ ಕಾಂಪೌಂಡ್ ನಿರ್ಮಿಸುವ ಬದಲು ಹೊಸ ಕಟ್ಟಡವನ್ನೇ ನಿರ್ಮಿಸಿ ಎಂದು ಕೋರ್ಟ್ ಆದೇಶಿಸಿದೆ.

ಹಿಂದು ಧರ್ಮ ಗುರು ಶ್ರೀ ಪರಮಹಂಸ ಅವರು ೧೯೧೯ರಲ್ಲಿ ತೀರಿಕೊಂಡ ಮೇಲೆ ಅವರ ಸಮಾಧಿ ಮತ್ತು ದೇವಾಲಯವನ್ನು ನಿರ್ಮಿಸಲಾಗಿತ್ತು. ಆದರೆ ಕೆಲವು ಮೂಲಭೂತವಾದಿಗಳು ಈ ದೇವಾಲಯವನ್ನು ಧ್ವಂಸಗೊಳಿಸಿದ್ದರು. ಪರಮಹಂಸರ ಭಕ್ತಾದಿಗಳು ಈ ಕಟ್ಟಡವನ್ನು ಮರುನಿರ್ಮಿಸಲು ಪ್ರಯತ್ನ ಪಟ್ಟಿದ್ದರು ಕೂಡ, ಆ ಜಾಗವನ್ನು ಪ್ರಾದೇಶಿಕ ಮುಫ್ತಿ ಇಫ್ತಿಕರುದ್ದೀನ್ ಆಕ್ರಮಿಸಿಕೊಂಡ ಆರೋಪ ಕೇಳಿಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್