ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಹೆಣ್ಣುಮಕ್ಕಳನ್ನು ಚುಡಾಯಿಸುವ ೩೭೦ ಪುರುಷರನ್ನು ಬಂಧಿಸಿದ ದೆಹಲಿ ಪೊಲೀಸರು

ಕೇವಲ ೨೦ ದಿನಗಳಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವುದನ್ನು ಚಟವಾಗಿಸಿಕೊಂಡಿದ್ದ ೩೭೦ ಪುರುಷರನ್ನು ದೆಹಲಿ ಪೊಲೀಸರು ಬಂಧಿಸಿದ್ದು ಮತ್ತು ೨೪೦೦

ನವದೆಹಲಿ: ಕೇವಲ ೨೦ ದಿನಗಳಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವುದನ್ನು ಚಟವಾಗಿಸಿಕೊಂಡಿದ್ದ ೩೭೦ ಪುರುಷರನ್ನು ದೆಹಲಿ ಪೊಲೀಸರು ಬಂಧಿಸಿದ್ದು ಮತ್ತು ೨೪೦೦ ಪುರುಷರನ್ನು ಅಲ್ಪ ಕಾಲದವರೆಗೆ ಬಂಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ. ಇದು ದೇಶದ ರಾಜಧಾನಿಯಲ್ಲಿ ಮಹಿಳೆಯರ ಮೇಲೆ ಎಸಗುವ ದೌರ್ಜನ್ಯದ ಎಲ್ಲೆಯನ್ನು ತಿಳಿಸುತ್ತದೆ.

ಶಾಪಿಂಗ್ ಮಾಲ್ ಗಳು, ವಿಶ್ವವಿದ್ಯಾಲಯದ ಕ್ಯಾಂಪಸ್ ಗಳು ಮತ್ತು ಹೆಚ್ಚು ಜನ ವಲಸಿಗರು ಸೇರುವ ಜಾಗ ಈ ಆರೋಪಿಗಳಿಗೆ ಹೆಣ್ಣು ಮಕ್ಕಳನ್ನು ಚುಡಾಯಿಸುವುದಕ್ಕೆ ನೆಚ್ಚಿನ ಸ್ಥಳಗಳಾಗಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿರಿವಂತರೇ ಹೆಚ್ಚಿರುವ ದೆಹಲಿಯ ದಕ್ಷಿಣ ಭಾಗ ಪೊಲೀಸರು ವಶಕ್ಕೆ ತೆಗೆದುಕೊಂಡ ಈ ಪೀಡುಕರ ಪಟ್ಟಿಯಲ್ಲಿ ಮೇಲಿದೆ. ಈ ಭಾಗದಲ್ಲಿ ಆಗಸ್ಟ್ ೩ ರಿಂದ ೨೩ ರ ವರಗೆ ರಸ್ತೆಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಕ್ಕೆ ೮೩೧ ಜನರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

"ಈ ಪೀಡುಕರನ್ನು ವಶಕ್ಕೆ ತೆಗೆದುಕೊಂಡ ಮೇಲೆ ಅವರ ಪೋಷಕರಿಗೆ ಕರೆ ಮಾಡಿ ಎನ್ ಜಿ ಒ, ಧಾರ್ಮಿಕ ಗುರುಗಳು ಮತ್ತು ಸಾಮಾಜಿಕ ಕಾರ್ಯಕರ್ತರಿಂದ ಉಪದೇಶ ತೆಗೆದುಕೊಳ್ಳುವಂತೆ ಹೇಳಿದ್ದೇವೆ. ಬಿಡುಗಡೆಗೂ ಮುಂಚಿತವಾಗಿ ಇಂತಹ ಕೆಲಸಗಳನ್ನು ಮತ್ತೆ ಮಾಡುವುದಿಲ್ಲ ಎಂದು ವಚನ ತೆಗೆದುಕೊಳ್ಳಲಾಗಿದೆ" ಎಂದು ದೆಹಲಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT