ಡಾ.ಎಂಎಂ ಕಲಬುರ್ಗಿ ಮತ್ತು ಅವರ ಪತ್ನಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಿಷ್ಠುರ ನಡೆಯ ವ್ಯಕ್ತಿತ್ವದ ಚಿತ್ರ

ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ 28.11.1938ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು...

- ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ 28.11.1938ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ತಾಯಿ ಗುರಮ್ಮ ತಂದೆ ಮಡಿವಾಳಪ್ಪ.
- ಕರ್ನಾಟಕದ ಪ್ರಸಿದ್ಧ ವಿದ್ವಾಂಸರಲ್ಲಿ ಒಬ್ಬರಾದ ಇವರು ಅಧ್ಯಯನ ಮತ್ತು ಕೊಡುಗೆಗಳು, ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ,  ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಹರಡಿಕೊಂಡಿವೆ.
- ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ.ಎಂ..ಎ.ಪದವಿ. 1968ರಲ್ಲಿ ಅವರು ಸಲ್ಲಿಸಿದ, `ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ' ಎಂಬ ಮಹಾಪ್ರಬಂಧಕ್ಕೆ ಪಿ.ಎಚ್‍ಡಿ. ಪದವಿ ಬಂತು.  1962ರಲ್ಲಿ ಕರ್ನಾಟಕ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ. 1966 ರಲ್ಲಿ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠ'ದಲ್ಲಿ ಅಧ್ಯಾಪಕರಾಗಿ ನೇಮಕ. 1998-2001 ರ ಕಾಲಾವಧಿಯಲ್ಲಿ ಕಲಬುರ್ಗಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿದ್ದರು. ಕರ್ನಾಟಕ ಸರ್ಕಾರ ಪ್ರಕಟಿಸಿದ ಹದಿನೈದು ಸಂಪುಟಗಳ `ವಚನಸಾಹಿತ್ಯ ಸಂಪುಟ'ಮಾಲೆಗೆ ಪ್ರಧಾನ ಸಂಪಾದಕರಾಗಿದ್ದರು.

ಕವನ ಸಂಕಲನ
- ನೀರು ನೀರಡಿಸಿತ್ತು, ನಾಟಕ, ಕೆಟ್ಟಿತ್ತು ಕಲ್ಯಾಣ ಕವಿರಾಜಮಾರ್ಗ ಪರಿಸರದ ಕನ್ನಡಸಾಹಿತ್ಯ
- ಮಾರ್ಗ - ನಾಲ್ಕು ಸಂಪುಟಗಳು
- ಐತಿಹಾಸಿಕ
- ಕನ್ನಡ ಹಸ್ತಪ್ರತಿ ಶಾಸ್ತ್ರ
- ಕನ್ನಡ ಗ್ರಂಥ ಸಂಪಾದನ ಶಾಸ್ತ್ರ
- ಕನ್ನಡ ಸಂಶೋಧನ ಶಾಸ್ತ್ರ
- ಕನ್ನಡ ನಾಮವಿಜ್ಞಾನ
- ಧಾರವಾಡ ಜಿಲ್ಲೆಯ ಶಾಸನಸೂಚಿ
- ಮಹಾರಾಷ್ಟ್ರದ ಕನ್ನಡ ಶಾಸನಗಳು
- ಶಾಸನಗಳಲ್ಲಿ ಶಿವಶರಣರು ಶಾಸನಶಾಸ್ತ್ರ
- ಶಾಸನ ವ್ಯಾಸಂಗ, ಭಾಗ 1 ಮತ್ತು ಭಾಗ 2
- ಶಾಸನ ವ್ಯಾಸಂಗ: ಸಮಾಧಿ, ಬಲಿದಾನ, ವೀರಮರಣ ಸ್ಮಾರಕಗಳು
- ಶಾಸನ ಸಂಪದ
- ಧಾರವಾಡ ಜಿಲ್ಲೆಯ ಶಾಸನಸೂಚಿ ಶೈಕ್ಷಣಿಕ ಶಿಸ್ತುಗಳ ಕುರಿತ ಕೃತಿಗಳು
- ಕನ್ನಡ ಗ್ರಂಥಸಂಪಾದನ ಶಾಸ್ತ್ರ
- ಕನ್ನಡ ಹಸ್ತಪ್ರತಿಶಾಸ್ತ್ರ
- ಕನ್ನಡ ಸಂಶೋಧನಶಾಸ್ತ್ರ
- ಕನ್ನಡ ಸ್ಥಳನಾಮವಿಜ್ಞಾನ ಗ್ರಂಥಸಂಪಾದನೆ
- ಶಿವಯೋಗ ಪ್ರದೀಪಿಕಾ
- ಕೊಂಡಗುಳಿ ಕೇಶಿರಾಜನ ಕೃತಿಗಳು
- ಬಸವಣ್ಣನ ಟೀಕಿನ ವಚನಗಳು
- ಸಿರುಮನಾಯಕನ ಸಾಂಗತ್ಯ ಪ್ರಶಸ್ತಿ-ಪುರಸ್ಕಾರ
- ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಾನಪದ ಪ್ರಶಸ್ತಿ
- ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ,
- ರಾಜ್ಯೋತ್ಸವ ಪ್ರಶಸ್ತಿ
- ಪಂಪ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ
- 2006ನೆಯ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅಭಿನಂದನೆ
- ಕಲಬುರ್ಗಿ-60 ಮತ್ತು ಮಹಾಮಾರ್ಗ ಸಲ್ಲಿಸಿರುವ ಅಭಿನಂದನ ಗ್ರಂಥ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT