ವಿಧಾನ ಸೌಧ 
ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ ಮೊಕದ್ದಮೆ ಸಿಬಿಐಗೆ ವಹಿಸಲು ರಾಜ್ಯ ಸಂಪುಟ ಸಭೆ ನಿರ್ಧಾರ

ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ...

ಬೆಂಗಳೂರು: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 'ಪ್ರಕರಣದ ತನಿಖೆ ನಡೆಸುವಂತೆ ಸರ್ಕಾರ ಸಿಬಿಐಗೆ ಪತ್ರ ಬರೆಯಲಿದೆ' ಎಂದು ತಿಳಿಸಿದ ಸಚಿವರು, ಸಿಬಿಐ ತನಿಖೆಗೆ ಒಪ್ಪಿಕೊಳ್ಳುವ ತನಕ ಸಿಐಡಿ ತನಿಖೆ ನಡೆಯಲಿದೆ ಎಂದರು.

'ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿವರವಾಗಿ ಚರ್ಚಿಸಲಾಗಿದ್ದು, ಎಲ್ಲಾ ಸಚಿವರ ಅಭಿಪ್ರಾಯ ಪಡೆದ ನಂತರ ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಸಿಬಿಐಗೆ ಪತ್ರ ಬರೆದು ಮನವಿ ಮಾಡಲಿದೆ ಎಂದು ಜಯಚಂದ್ರ ವಿವರಣೆ ನೀಡಿದರು.

'ಸಿಬಿಐ ತನಿಖೆಗೆ ಒಪ್ಪಿಕೊಳ್ಳುವ ತನಕ, ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಲಿದೆ. ಈಗಾಗಲೇ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ' ಎಂದು ಜಯಚಂದ್ರ ಅವರು ತಿಳಿಸಿದರು. ಭಾನುವಾರ ಬೆಳಗ್ಗೆ ಧಾರವಾಡದಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!