ಹೆಚ್.ಡಿ ದೇವೇಗೌಡ 
ಪ್ರಧಾನ ಸುದ್ದಿ

ಬಿಜೆಪಿ ಜತೆ ಮೈತ್ರಿ ಮುಗಿದ ಅಧ್ಯಾಯ: ದೇವೇಗೌಡ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಜತೆ ಮೈತ್ರಿ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಜತೆ ಮೈತ್ರಿ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ. 
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರನ್ನು ಬಿಟ್ಟರೆ ಮತ್ಯಾವ ಬಿಜೆಪಿ ನಾಯಕರು ನಮ್ಮ ಜತೆ ಚರ್ಚೆ ನಡೆಸಿಲ್ಲ. ಹೀಗಾಗಿ  ಬಿಜೆಪಿ ನಾಯಕರ ಚರ್ಚೆಗೆ ಸಮಯ ಮುಗಿದುಹೋಗಿದೆ ಎಂದು ಹೇಳಿದ್ದಾರೆ. 
ಜೆಡಿಎಸ್ ಪಕ್ಷದಿಂದ 21 ಸದಸ್ಯರ ಸಂಖ್ಯೆಯ ಆಧಾರದಲ್ಲಿ ಜೆಡಿಎಸ್ ಗೆ 3 ರಿಂದ 4 ಸ್ಥಾನ ಹೀಗಾಗಿ ಉಪಮೇಯರ್ ಸ್ಥಾನವೇ ಬೇಕೆಂದು ನಾವು ಬೇಡಿಕೆ ಇಡುವುದಿಲ್ಲ. ಕಾಂಗ್ರೆಸ್ಗೆ ಬೆಂಬಲ ನೀಡಿದರೂ ನಾನು ಷರತ್ತು ಹಾಕಲ್ಲ. ಮೈತ್ರಿ ಕುರಿತು ನನ್ನ ಜತೆ ಮಾತನಾಡುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದರೆ ಸಾಕು ಎಂದು ಹೇಳಿದ್ದಾರೆ.
ಆಪರೇಷನ್ ಕಮಲ ಮೂಲಕ ಜೆಡಿಎಸ್ ನ 6 ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಸಿದ್ದಾರೆ ಎಂಬ ಮಾಹಿತಿಯನ್ನು ಜೆಡಿಎಸ್ ಶಾಸಕರೊಬ್ಬರು ನನಗೆ ತಿಳಿಸಿದ್ದರು. ಹೀಗಾಗಿ ಜೆಡಿಎಸ್ ಕಾರ್ಪೋರೇಟರ್ಸ್ ಬೆಂಗಳೂರಿನಲ್ಲಿ ಇರುವುದು ಬೇಡ. ಬೆಂಗಳೂರು ಹೊರವಲಯದ ರೆಸಾರ್ಟ್ ಗೆ ತೆರಳಿ ಎಂದು ಹೇಳಿದ್ದೆ. ಆದರೆ ಅವರು ಕೇರಳಕ್ಕೆ ಹೋಗಿದ್ದರು ಎಂಬ ವಿಚಾರ ನನಗೆ ತಿಳಿದಿಲ್ಲ ಎಂದು ದೇವೇಗೌಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT