ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಲ ಪ್ರಳಯದ ನಡುವೆಯೂ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೆನ್ನೈ ಜೋಡಿ

ನಮ್ಮ ಜೀವನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮದುವೆ ಮೊದಲ ಆಯ್ಕೆಯಾಗಿರುವುದಿಲ್ಲ. ಆದರೆ ಕುಂಭದ್ರೋಣ ಮಳೆಯಿಂದಾಗಿ ಜಲ ಪ್ರಳಯ...

ಚೆನ್ನೈ: ನಮ್ಮ ಜೀವನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮದುವೆ ಮೊದಲ ಆಯ್ಕೆಯಾಗಿರುವುದಿಲ್ಲ. ಆದರೆ ಕುಂಭದ್ರೋಣ ಮಳೆಯಿಂದಾಗಿ ಜಲ ಪ್ರಳಯ ಉಂಟಾಗಿರುವ ತಮಿಳುನಾಡಿನಲ್ಲಿ ಮಳೆಯನ್ನೂ ಲೆಕ್ಕಿಸದೇ ಬುಧವಾರ ಹಲವು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

'ಇಂದು ಮದುವೆಗೆ ಶುಭ ದಿನ. ಹೀಗಾಗಿ ನಿಗದಿಯಂತೆ ನಮ್ಮ ಹಾಲ್‌ನಲ್ಲಿ ಮದುವೆ ಸಮಾರಂಭ ನಡೆಯಿತು' ಎಂದು ಎವಿಎಂ ರಾಜೇಶ್ವರಿ ಕಲ್ಯಾಣ ಮಂಟಪದ ವ್ಯವಸ್ಥಾಪಕ ಕೆ.ಎಂ. ಕಣ್ಣನ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

'ಯಾವುದೇ ವಿಘ್ನವಿಲ್ಲದೆ ಮದುವೆಗಳು ನಡೆಯುತ್ತಿವೆ ಮತ್ತು ಮಳೆಯಿಂದಾಗಿ ಮದುವೆ ಮುಂದೂಡಿದ ಸುದ್ದಿ ನಾನು ಇದುವರೆಗೂ ಕೇಳಿಲ್ಲ' ಎಂದು ಅವರು ಹೇಳಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದ 1 ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ತತ್ತರಿಸಿದ್ದ ಚೆನ್ನೈನಲ್ಲಿ ಮತ್ತೆ ಮಳೆಯಾಗುತ್ತಿದ್ದು, ನಗರವೆಲ್ಲಾ ಸಂಪೂರ್ಣ ಜಲಮಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ