ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ತಮಿಳುನಾಡಿನಲ್ಲಿ ಜಲ ಪ್ರಳಯ: ತುರ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ ನೆರವು

ಕುಂಭದ್ರೋಣ ಮಳೆಯಿಂದಾಗಿ ನೆರೆಯ ತಮಿಳುನಾಡಿನಲ್ಲಿ ಜಲ ಪ್ರಳಯ ಉಂಟಾಗಿದ್ದು, ತುರ್ತು ಪರಿಹಾರ ಕಾರ್ಯಕ್ಕೆ ನೆರವು ನೀಡುವುದಾಗಿ ಬುಧವಾರ ರಾಜ್ಯ...

ಮಳೆಗೆ ತತ್ತರಿಸಿದ ಚೆನ್ನೈ
Lingaraj Badiger
Updated On : 2 Dec 2015, 4:49 am

ಬೆಂಗಳೂರು: ಕುಂಭದ್ರೋಣ ಮಳೆಯಿಂದಾಗಿ ನೆರೆಯ ತಮಿಳುನಾಡಿನಲ್ಲಿ ಜಲ ಪ್ರಳಯ ಉಂಟಾಗಿದ್ದು, ತುರ್ತು ಪರಿಹಾರ ಕಾರ್ಯಕ್ಕೆ ನೆರವು ನೀಡುವುದಾಗಿ ಬುಧವಾರ ರಾಜ್ಯ ಸರ್ಕಾರ ಘೋಷಿಸಿದೆ.

ತಮಿಳುನಾಡಿಗೆ 5 ಕೋಟಿ ಪರಿಹಾರದ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ತಮಿಳುನಾಡು ಅಧಿಕಾರಿಗಳೊಂದಿಗೆ ಚರ್ಚಿಸಿ, ಔಷಧಿ ಹಾಗೂ ಅಗತ್ಯ ಪರಿಹಾರ ಸಾಮಗ್ರಿ ಪೂರೈಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದ 1 ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ತತ್ತರಿಸಿದ್ದ ಚೆನ್ನೈನಲ್ಲಿ ಮತ್ತೆ ಮಳೆಯಾಗುತ್ತಿದ್ದು, ನಗರವೆಲ್ಲಾ ಸಂಪೂರ್ಣ ಜಲಮಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments