ಕಿರಣ್ ರಿಜಿಜು 
ಪ್ರಧಾನ ಸುದ್ದಿ

ಪನ್ಸಾರೆ, ದಾಭೋಲ್ಕರ್, ಕಲಬುರ್ಗಿ ಹತ್ಯೆಯ ನಡುವೆ ಸಂಬಂಧ ಇಲ್ಲ: ಕಿರಣ್ ರಿಜಿಜು

ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಬಂಧ...

ನವದೆಹಲಿ: ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಬಂಧ ಇಲ್ಲ ಎಂದು ಬುಧವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಹೇಳಿಕೆ ನೀಡಿದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು, 'ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಪರ್ಕ ಅಥವಾ ಸಂಬಂಧ ಇಲ್ಲ' ಎಂದು ಹೇಳಿದರು.

ಇದೇ ವೇಳೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಿಜಿಜು, ಬಲಪಂಥಿಯ ಸನಾತನ ಸಂಸ್ಥೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಸದ್ಯ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಪನ್ಸಾರೆ ಹತ್ಯೆ ಪ್ರಕರಣ ಸಂಬಂಧ ಇತ್ತೀಚಿಗೆ ಸನಾತನ ಸಂಸ್ಥೆಯ ಕೆಲವು ಸದಸ್ಯರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!