ಸಿಎಂ ಸಿದ್ದರಾಮಯ್ಯ ಮತ್ತು ಬಾಲಿವುಡ್ ಗಣ್ಯರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಚೆನ್ನೈ ಪ್ರವಾಹ: ಕರ್ನಾಟಕದಿಂದ ರು.5 ಕೋಟಿ ನೆರವು

ಸತತ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ತಮಿಳುನಾಡಿಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣಕ್ಕೆ ರು.5 ಕೋಟಿ ನೆರವು ನೀಡಲಾಗಿದೆ...

ನವದೆಹಲಿ: ಸತತ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ತಮಿಳುನಾಡಿಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣಕ್ಕೆ ರು.5 ಕೋಟಿ ನೆರವು  ನೀಡಲಾಗಿದೆ.

ಸಾರಿಗೆ, ಔಷಧ, ಆಹಾರ ಸೇರಿದಂತೆ ಯಾವುದೇ ರೀತಿಯ ನೆರವು ಬೇಕಾದರೂ ನೀಡಲು ರಾಜ್ಯ ಸಿದ್ಧವಿದೆ. ಈ ಸಂಬಂಧ ತಮಿಳುನಾಡು ಮುಖ್ಯ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲು  ರಾಜ್ಯದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಿಡಿದ ಸೆಲೆಬ್ರಿಟಿಗಳು
ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್ ಬಚ್ಚನ್, ರಿಷಿ ಕಪೂರ್, ಫರ್ಹಾನ್ ಅಖ್ತರ್ ಮುಂತಾದವರು ಚೆನ್ನೈ ಮಳೆ ಸಂತ್ರಸ್ತರಿಗಾಗಿ ಮಿಡಿದಿದ್ದಾರೆ. ಚೆನ್ನೈ ಮಳೆಯಲ್ಲಿ ಸಿಕ್ಕಿಕೊಂಡವರಿಗಾಗಿ  ಅಮಿತಾಭ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾದವರಿಗೆ ಹೃದಯಪೂರ್ವಕ ಸಹಾಯ ಸೂಚಿಸಿದ್ದಾರೆ. ರಿಷಿಕಪೂರ್ ಹೆಲ್ಪ್‍ಲೈನ್ ಸಂಖ್ಯೆಗಳನ್ನು  ಟ್ವಿಟ್ ಮಾಡಿದ್ದಾರೆ. ಅಭಿಷೇಕ್ ಬಚ್ಚನ್, ಪರಿಣೀತಿ ಚೋಪ್ರಾ ಮುಂತಾದವರು ಸಂತ್ರಸ್ತರಿಗೆ ನೆರವಾಗುವಂತೆ ಜನತೆಗೆ ಕಳಕಳಿಯ ಮನವಿ ಮಾಡಿದ್ದಾರೆ. ರವೀನಾ ಟಂಡನ್, ದಿಯಾ ಮಿರ್ಜಾ  ಮುಂತಾದವರು ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದವರಿಗೆ ಅಭಿನಂದನೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT