ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.
ಇಂದು ಬೆಳಗ್ಗೆಯಿಂದ ಮಳೆ ಬಂದಿಲ್ಲ. ಹೀಗಾಗಿ ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜನರ ತಮ್ಮ ದಿನಬಳಕೆ ವಸ್ತುಗಳಿಗಾಗಿ ಮನೆಯಿಂದ ಹೊರ ಬರುತ್ತಿದ್ದಾರೆ.
ಇನ್ನು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೂ 9 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಾಹ ನಿರ್ದೇಶಕ ಒ.ಪಿ.ಸಿಂಗ್ ಅವರು ತಿಳಿಸಿದ್ದಾರೆ.
ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಉತ್ತಮವಾಗುತ್ತಿದ್ದು, ಮುಂದಿನ ಮೂರು ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ನಿರಂತರ ಯತ್ನ ನಡೆಸುತ್ತಿದ್ದಾರೆ ಎಂದು ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.