ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ 
ಪ್ರಧಾನ ಸುದ್ದಿ

ದಲಿತರಿಗಾಗಿ 1.5 ಕೋಟಿ ಮನೆ ನಿರ್ಮಿಸಲು ಯೋಜನೆ

ರಾಜ್ಯದಲ್ಲಿ ದಲಿತರಿಗಾಗಿ 1.5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ದಲಿತರಿಗಾಗಿ 1.5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ರಾಜ್ಯದಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದ್ದು, ಅವರಿಗಾಗಿ ಮೀಸಲಿಟ್ಟ ಹಣ ದುರುಪಯೋಗದಂತೆ ಎಚ್ಚರವಹಿಸಲಾಗುವುದು. ಈ ವರ್ಷದ ಬಜೆಟ್‍ನಲ್ಲಿ  ಮೀಸಲಿಟ್ಟ ಅನುದಾನ ಬಳಕೆಯಾಗದಿದ್ದರೆ ಮುಂದಿನ ವರ್ಷದಲ್ಲಿ ಬಳಸಿಕೊಳ್ಳುವ ಅವಕಾಶವಿದೆ ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ ಅವರ ಜನ್ಮ ದಿನದ 125ನೇ ವರ್ಷಾಚರಣೆ  ಅಂಗವಾಗಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಶನಿವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ದಲಿತರ ರಾಜ್ಯ ಸಮಾವೇಶದಲ್ಲಿ ಮಾತನಾಡಿದರು. ಸಮಾಜದಲ್ಲಿ ಜೀವಂತವಾಗಿರುವ  ಜಾತಿ ಪದ್ಧತಿ, ಅಷ್ಟು ಸುಲಭವಾಗಿ ಹೋಗುವುದಿಲ್ಲ. ಮೇಲ್ವರ್ಗದವರ ಮನಸ್ಸು ಪರಿವರ್ತನೆಯಾದರೆ ಇದಕ್ಕೆ ಮುಕ್ತಿ. ರಾಜ್ಯ ಸರ್ಕಾರ ದಲಿತರನ್ನು ಆರ್ಥಿಕವಾಗಿ ಸಬಲರಾಗಿಸಲು ಬದ್ಧವಾಗಿದೆ.  ದೇವದಾಸಿಯರಿಗೆ ನೀಡುತ್ತಿದ್ದ ಮಾಸಾಶನವನ್ನು ರು.500 ರಿಂದ ರು.1000 ರು.ಗೆ ಹೆಚ್ಚಿಸಿದೆ.

ಮೇಲ್ಜಾತಿ ಹುಡುಗ ದಲಿತ ಹುಡುಗಿಯನ್ನು ವಿವಾಹವಾದರೆ 3 ಲಕ್ಷ, ದಲಿತ ಹುಡುಗ ಮೇಲ್ಜಾತಿ ಹುಡುಗಿ ಮದುವೆಯಾದರೆ ರು.2 ಲಕ್ಷ, ಸರಳ ವಿವಾಹಕ್ಕೆ ರು.50 ಸಾವಿರ ಪ್ರೋತ್ಸಾಹ ಧನ  ನೀಡಲಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾದವರಿಗೆ ಉದ್ಯೋಗ, ಭೂಮಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘವಲು, ಸಿಪಿಐ(ಎಂ) ಪಾಲಿಟ್ ಬ್ಯೂರೋ ರಾಜ್ಯ ಕಾರ್ಯದರ್ಶಿ ಬಿ.ವಿ.ಶ್ರೀರಾಮರೆಡ್ಡಿ ಮಾತನಾಡಿದರು.

ಸಮಸ್ಯೆ ಸುರಿಮಳೆ ಸಚಿವರು ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಮಯದಲ್ಲೇ ಅನೇಕ ಜನರು ಸಚಿವರಿಗೆ ಸಮಸ್ಯೆಗಳ ಸುರಿಮಳೆಗೈದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಜನರು  ತಮ್ಮ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾಯ ಸರಿಪಡಿಸುವಂತೆ ಕೋರಿದರು. ಆಗ ಕೆಲಕಾಲ ಗದ್ದಲ ಉಂಟಾಯಿತು. ಕೂಡಲೇ ಎಚ್ಚೆತ್ತ ಕಾರ್ಯಕ್ರಮ ಆಯೋಜಕರು ಎಲ್ಲರನ್ನು ವೇದಿಕೆಯಿಂದ  ಕೆಳಗಿಳಿಸಿದರು. ನಂತರ ಮಾತನಾಡಿದ ಸಚಿವರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿರುವುದಲ್ಲಿ ಏನು ತಪ್ಪಿಲ್ಲ. ನಿಮ್ಮಂತೆ ನಾನು ನೋವು ಅನುಭವಿಸಿದವನು. ನಿಮ್ಮ ಕಣ್ಣೀರು ಒರೆಸಲು ಸದಾ  ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.

ದಲಿತ ಪರ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ನನ್ನ ಗಮನಕ್ಕೆ ತನ್ನಿ. ಹಿಂಪಡಯಲು ಕ್ರಮ ಕೈಗೊಳ್ಳಲಾಗುವುದು. ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಅವರ  ಕೈಗಳನ್ನು ಕಟ್ಟಿಹಾಕಬಾರದು.
-ಎಚ್ ಆಂಜನೇಯ, ಸಮಾಜ ಕಲ್ಯಾಣ ಸಚಿವ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT