ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸರಿ ಬೆಸ ಸಂಖ್ಯೆಯ ಆಧಾರದ ಮೇಲೆ ವಾಹನ ಕಡಿವಾಣದಿಂದ ಬಡಜನಕ್ಕೆ ತೊಂದರೆ: ಬಿಜೆಪಿ

ವಾಹನ ನೊಂದಣಿ ಸಂಖ್ಯೆಯ ಕೊನೆಯ ಅಂಕಿ ಸರಿ ಅಥವಾ ಬೆಸದ ಆಧಾರದ ಮೇಲೆ ಬದಲಿ ದಿನ ಓಡಾಟಕ್ಕೆ ಕಣಿವಾಣ ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೂ ಮುಂಚಿತವಾಗಿ

ನವದೆಹಲಿ: ವಾಹನ ನೊಂದಣಿ ಸಂಖ್ಯೆಯ ಕೊನೆಯ ಅಂಕಿ ಸರಿ ಅಥವಾ ಬೆಸದ ಆಧಾರದ ಮೇಲೆ ಬದಲಿ ದಿನ ಓಡಾಟಕ್ಕೆ ಕಣಿವಾಣ ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೂ ಮುಂಚಿತವಾಗಿ ಎಲ್ಲರ ಸಲಹೆಗಳನ್ನು ಪರಿಗಣಿಸಬೇಕಿತ್ತು ಎಂದು ಸೋಮವಾರ ಬಿಜೆಪಿ ಸಂಸದ ಮಹೇಶ್ ಗಿರಿ ದೂರಿದ್ದಾರೆ.

ಈ ನಿಯಮ ಬಡ ಜನರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಕೂಡ ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಪೂರ್ವ ದೆಹಲಿ ಸಂಸದ ಗಿರಿ, ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಕಳವಳಕಾರಿಯೇ ಆದರೆ ಇದನ್ನು ತಡೆಗಟ್ಟಲು ದೆಹಲಿ ಸರ್ಕಾರ ಬೇರೆ ತರಹದ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಕಾರ್ಖಾನೆ ಸಮುಚ್ಚಯಗಳು ರಾಜಧಾನಿಯ ಪರಿಸರವನ್ನು ಎಗ್ಗಿಲ್ಲದಂತೆ ಹಾಳುಗೆಡವುತ್ತಿವೆ ಎಂದು ಕೂಡ ಅವರು ಹೇಳಿದ್ದಾರೆ.

ಬದಲಿ ದಿನಗಳಂದು ಸರಿ ಅಥವಾ ಬೆಸದ ಆಧಾರದ ಮೇಲೆ ವಾಹನ ಓಡಾಟಕ್ಕೆ ಅವಕಾಶ ನೀಡುವುದು ಸಿರಿವಂತರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅವರಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳಿರುತ್ತವೆ ಆದರೆ ಕಡಿಮೆ ವೇತನದ ನಿವಾಸಿಗಳು ದ್ವಿಚಕ್ರವಾಹನಗಳನ್ನು ಬಳಸುತ್ತಾರೆ. ಅವರಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ ಎಂದಿದ್ದಾರೆ.

"ಈ ನಿಟ್ಟಿನಲ್ಲಿ ಯಾವುದೇ ಚಿಂತನೆ ನಡೆದಿಲ್ಲ, ಎಲ್ಲರ ಸಲಹೆಗಳನ್ನು ಪರಿಗಣಿಸುವ ಅವಶ್ಯಕತೆ ಇತ್ತು" ಎಂದು ಅವರು ತಿಳಿಸಿದ್ದಾರೆ.

ಈ ಹೊಸ ನಿಯಮ ಜನವರಿ ೧ ರಿಂದ ಜಾರಿಗೆ ಬರಲಿದೆ. ಇದು ಸಾರ್ವಜನಿಕರಿಗೆ ಅತಿ ಹೆಚ್ಚು ತೊಂದರೆ ಉಂಟುಮಾಡಿದರೆ, ಈ ನಿಯಮವನ್ನು ರದ್ದು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕೂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!