ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ, ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅರವಿಂದ್ ಕೇಜ್ರಿವಾಲ್ ಅವರು ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟೆಲೆಗ್ರಾಫ್ ವರದಿಯ ಪ್ರಕಾರ, ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರನ್ನು ಸಿಎಂ ಮಾಡಿ, ತಾವು ಪಂಜಾಬ್‌ನಲ್ಲಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸಲಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಆಮ್ ಆದ್ಮಿ ಪಕ್ಷದ ವಕ್ತಾರ ಆಶುತೋಷ್ ಅವರು ಮಾಧ್ಯಮ ವರದಿಯನ್ನು ತಳ್ಳಿಹಾಕಿದ್ದು, ದೆಹಲಿ ಸಿಎಂ ಕುರಿತ ಮಾಧ್ಯಮಗಳ ವರದಿ ಆಧಾರ ರಹಿತ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪುಷ್ಠಿ ನೀಡುವಂತೆ ಈ ತಿಂಗಳ ಆರಂಭದಲ್ಲಿ ಕೇಜ್ರಿವಾಲ್ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿನ ಆಮ್ ಆದ್ಮಿ ಪಕ್ಷದ ಫಲಿತಾಂಶ ಪಂಜಾಬ್ ಚುನಾವಣೆಯಲ್ಲೂ ಮರುಕಳುಹಿಸಿದರೆ ಅಚ್ಚರಿ ಪಡಬೇಕಿಲ್ಲ ಎಂದಿದ್ದರು. 2017ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ.