ಮಾನವ ಸಂಪನ್ಮೂಲಗಳ ಅಭಿವೃದ್ಧಿ ಕೆಂದ್ರ ಸಚಿವೆ ಸ್ಮೃತಿ ಇರಾನಿ 
ಪ್ರಧಾನ ಸುದ್ದಿ

'ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಗಾಂಧಿ ಹೇಳಿಕೆ, ಪ್ರಜಾಪ್ರಭುತ್ವಕ್ಕೆ ತೋರಿದ ಅವಮಾನ'

ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿಯವರ ಕಾರ್ಯಾಲಯದಿಂದ ಹೊರಹೊಮ್ಮಿರುವ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿರುವ ಹಿನ್ನಲೆಯಲ್ಲಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿಯವರ ಕಾರ್ಯಾಲಯದಿಂದ ಹೊರಹೊಮ್ಮಿರುವ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿರುವ ಹಿನ್ನಲೆಯಲ್ಲಿ ಇದನ್ನು ವಿರೋಧಿಸಿರುವ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಕೆಂದ್ರ ಸಚಿವೆ ಸ್ಮೃತಿ ಇರಾನಿ, ಇದು ಪ್ರಜಾಪ್ರಭುತ್ವಕ್ಕೆ ತೋರಿದ ಅವಮಾನ ಎಂದಿದ್ದಾರೆ.

"ನಮ್ಮ ಪ್ರಜಾಪ್ರಭುತ್ವಕ್ಕೆ ಇದಕ್ಕಿಂತಲೂ ದೊಡ್ಡ ಅವಮಾನ ಇನ್ನೊಂದಿಲ್ಲ. ಯಾರದೋ ಹಿತಕ್ಕಾಗಿ ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವ ಕೆಲಸ ಮಾಡುವುದಿಲ್ಲ" ಎಂದು ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.

"ನ್ಯಾಯಾಂಗ ಗಾಂಧಿ ಕುಟುಂಬದ ಮುಂದೆ ಮಂಡಿಯೂರದಿದ್ದರೆ, ಸಂಸತ್ತು ಕಾರ್ಯನಿರ್ವಹಿಸಲು ಅವಕಾಶ ನೀಡುವುದಿಲ್ಲ" ಎಂಬುದನ್ನು ಗಾಂಧಿ ನೀಡಿರುವ ಹೇಳಿಕೆಗಳು ತಿಳಿಸುತ್ತವೆ ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!