ಬೆಂಗಳೂರು: ಬೆಂಗಳೂರಿನ ಕಸದಿಂದ ವಿದ್ಯುತ್ ಉತ್ಪಾದನೆಗೆ ಪೋಲ್ಯಾಂಡ್ ಮೂಲದ ಕಂಪನಿ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.
ಪ್ರತಿ ದಿನ 400 ಟನ್ ಕಸದಿಂದ 4 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ಸುಮಾರು ರು.350 ಕೋಟಿ ವೆಚ್ಚದ ಯೋಜನೆ ಇದಾಗಿದೆ. ಗುರುವಾರ ಖಾಸಗಿ ಹೋಟೆಲೊಂದರಲ್ಲಿ ಎಕೋಲಾಗ್ ಕಂಪನಿ ನಿರ್ದೇಶಕ ರಾಬರ್ಟ್ ಜಾನ್ಸ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ರತ್ನಾಪ್ರಭ ಒಪ್ಪಂದಕ್ಕೆ ಸಹಿ ಹಾಕಿದರು.