ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಕಸಬಾ ಹೋಬಳಿ ಕಾಚರಕನಹಳ್ಳಿಯಲ್ಲಿ 1 ಎಕರೆ ಡಿನೋಟಿಫಿಕೇಷನ್ ಮಾಡಿದ ಪ್ರಕರಣವೊಂದರಲ್ಲಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ಪೊಲೀಸರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಒಂದನೇ ಹಂತಕ್ಕೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಒಟ್ಟು 8 ಎಕರೆಯಲ್ಲಿ 1 ಎಕರೆಯನ್ನ ಡಿನೋಟಿಪಿs ಕೇಷನ್ ಮಾಡಿರುವ ಪ್ರಕರಣ ಇದಾಗಿದೆ. ಯಡಿ ಯೂರಪ್ಪ ವಿರುದ್ಧ ಇದು 15ನೇ ಎಫ್ಐಆರ್.
ಡಿನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಸಿಎಜಿ ನೀಡಿದ್ದ ವರದಿ ಆಧರಿಸಿ ಜಯಕುಮಾರ್ ಹಿರೇ ಮಠ್ ಎಂಬುವರು ಸಲ್ಲಿಸಿದ್ದ ದೂರು ಆಧರಿಸಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದ ಲೋಕಾ ಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಪೊಲೀಸ್ ಉನ್ನತ ಮೂಲಗಳು ಖಚಿತಪಡಿಸಿವೆ. ಹೊಸದಾಗಿ ದಾಖ ಲಿಸಿರುವ ಎಫ್ಐಆರ್ ನಲ್ಲಿ ಯಡಿಯೂರಪ್ಪ ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಲಾ ಗಿದೆ. ಭ್ರಷ್ಟಾಚಾರ ತಡೆ ಕಾಯ್ಕೆಯ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.