ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ 
ಪ್ರಧಾನ ಸುದ್ದಿ

ಬಿಹಾರ ಮಾಜಿ ಮುಖ್ಯಮಂತ್ರಿ ಮಾಂಝಿ ಪುತ್ರಿ ವಿರುದ್ಧ ಪ್ರಕರಣ ದಾಖಲು

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಪುತ್ರಿ ಸುನೈನಾ ದೇವಿ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಗಯಾ ಜಿಲ್ಲೆಯಲ್ಲಿ ಸುನೈನಾ ದೇವಿ ಅವರ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಪುತ್ರಿ ಸುನೈನಾ ದೇವಿ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಗಯಾ ಜಿಲ್ಲೆಯಲ್ಲಿ ಸುನೈನಾ ದೇವಿ ಅವರ ಸೊಸೆ ಸಾವಿಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಿಸಲಾಗಿದೆ.

ಮೃತಪಟ್ಟ ಸೋನಿ ಅವರ ತಂದೆ, ಸುನೈನ ದೇವಿ ಮತ್ತು ಕುಟುಂಬದ ಇತರ ನಾಲ್ವರ ವಿರುದ್ಧ ಗಯಾ ಪಟ್ಟಣದ ದೆಲ್ಹಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

"ಸುನೈನ ಅವರ ಸೋನಿಯ ತಂದೆಯಾದ ರಾಮದೇವ್ ಮಾಂಝಿ ಅವರು ವರದಕ್ಷಿಣೆ ಕಿರುಕುಳಕ್ಕಾಗಿ ತಮ್ಮ ಪುತ್ರಿಯನ್ನು ಕೊಂದಿದ್ದಾರೆ ಎಂದು ದೂರಿ ಎಫ್ ಐ ಆರ್ ದಾಖಲಿಸಿದ್ದಾರೆ" ಎಂದು ಜಿಲ್ಲ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಮಗೆ ಗೊತ್ತಿಲ್ಲದಂತೆ ತಮ್ಮ ಮಗಳನ್ನು ದಹಿಸಿದ್ದಾರೆ ಎಂದು ಕೂಡ ರಾಮದೇವ್ ದೂರಿದ್ದಾರೆ. ಸುನೈನಾ ಅವರ ಮಗ ವಿಕಿ ಜೊತೆ ೨೦೦೮ರಲ್ಲಿ ತಮ್ಮ ಮಗಳ ವಿವಾಹವಾಗಿತ್ತು ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!