ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಆರ್ ಟಿಇ ಅಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ಹೈಕೋರ್ಟ್ ತಡೆ

ಖಾಸಗಿ ಸಂಸ್ಥೆಗಳಲ್ಲಿ ಆರ್​ಟಿಇ- ರೈಟ್ ಟು ಎಜ್ಯುಕೇಷನ್ ಅಡಿ ಎಲ್ ಕೆಜಿ ಹಾಗೂ ಯುಕೆಜಿ ಪ್ರವೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಂತರ...

ಸಾಂದರ್ಭಿಕ ಚಿತ್ರ
Lingaraj Badiger
Updated On : 22 Dec 2015, 4:36 am

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಆರ್​ಟಿಇ- ರೈಟ್ ಟು ಎಜ್ಯುಕೇಷನ್ ಅಡಿ ಎಲ್ ಕೆಜಿ ಹಾಗೂ ಯುಕೆಜಿ ಪ್ರವೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

1ರಿಂದ 8ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಬೇಕೆಂದು ಸರ್ಕಾರ ಕಾನೂನು ರೂಪಿಸಿದೆ. ಅಲ್ಲದೇ ಖಾಸಗಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿಗೂ ಆರ್ ಟಿಇ ಅಡಿ ಪ್ರವೇಶ ನೀಡಬೇಕೆಂದು ರಾಜ್ಯ ಸರ್ಕಾರ ಸೂಚಿಸಿತ್ತು. ಆದರೆ ಸರ್ಕಾರದ ಸೂಚನೆ ವಿರುದ್ಧ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದವು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, 2015-16ನೇ ಸಾಲಿನಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಪ್ರವೇಶಕ್ಕೆ ತಡೆ ನೀಡಿದೆ.

ಬಡ ಹಾಗೂ ಮಧ್ಯಮ ವರ್ಗದ ಪೋಷಕರ ಪಾಲಿಗೆ ತಮ್ಮ ಮಕ್ಕಳಿಗೆ ಅತ್ಯುನ್ನತ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ನೀಡುವುದಕ್ಕೆ ಇರುವ ಪವರ್​ಫುಲ್ ಕಾಯ್ದೆ ಈ ಆರ್ ಟಿಇ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement