ಸಿಂಬು 
ಪ್ರಧಾನ ಸುದ್ದಿ

ಅಶ್ಲೀಲ ಹಾಡು: ಕಾಲಿವುಡ್ ನಟ ಸಿಂಬುಗೆ ಬಂಧನ ಭೀತಿ

ಸಿನಿಮಾ ಹಾಡೊಂದರಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ ಎದುರಿಸುತ್ತಿರುವ ಕಾಲಿವುಡ್ ಖ್ಯಾತ ನಟ ಸಿಂಬು ಅವರಿಗೆ ಈಗ ಬಂಧನ ಬೀತಿ...

ಚೆನ್ನೈ: ಸಿನಿಮಾ ಹಾಡೊಂದರಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ ಎದುರಿಸುತ್ತಿರುವ ಕಾಲಿವುಡ್ ಖ್ಯಾತ ನಟ ಸಿಂಬು ಅವರಿಗೆ ಈಗ ಬಂಧನ ಬೀತಿ ಎದುರಾಗಿದ್ದು, ನಟನಿಗಾಗಿ ಪೊಲೀಸರು ಶೋಧ ಕಾರ್ಯಾ ಆರಂಭಿಸಿದ್ದಾರೆ.
ಮಹಿಳೆಯರಿಗೆ ಅಪಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ಬಳಿಕ ಸಿಂಬು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಟನ ಬಂಧನಕ್ಕಾಗಿ ಚೆನ್ನೈ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ, ಹುಟುಕಾಟ ಆರಂಭಿಸಿದ್ದಾರೆ.
ಈ ಮಧ್ಯೆ, ಸಿಂಬು ಬೆಂಗಳೂರಿನಲ್ಲಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಸಿಂಬು ಅವರು ಹಾಡಿದ ಲವ್ ಸಾಂಗ್‌ನಲ್ಲಿ ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆಂದು ಆರೋಪಿಸಿ ಚೆನ್ನೈ ಹಾಗೂ ಕೊಯಮತ್ತೂರಿನಲ್ಲಿ ಮಹಿಳಾ ಸಂಘಟನೆಗಳು ದೂರು ದಾಖಲಿಸಿದ್ದವು.

ಸಿಂಬು ಅವರ ಜೊತೆಗೆ ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿರುವ ಕೊಲವೆರಿ ಡಿ ಖ್ಯಾತಿಯ ಅನಿರುದ್ಧ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಹಾಡಿನಲ್ಲಿ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅವು ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿವೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಮಹಿಳೆಯರ ಸಮಿತಿ ದೂರು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ