ಪ್ರಧಾನ ಸುದ್ದಿ

ಪಾಕ್‌ಗೆ ಮೋದಿ ದಿಢೀರ್ ಭೇಟಿ ಬಗ್ಗೆ ಆಡ್ವಾಣಿ ಪ್ರಶಂಸೆ

Lingaraj Badiger
ನವದೆಹಲಿ: ದಿಢೀರ್ ಪಾಕಿಸ್ತಾನಕ್ಕೆ ಭೇಟಿ ನೀಡಿ, ಲಾಹೋರ್‌ನಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
'ಮೋದಿ ತೆಗೆದುಕೊಂಡ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಭಾರತ-ಪಾಕಿಸ್ತಾನ ಸಂಬಂಧವೃದ್ಧಿಗಾಗಿ ಮೋದಿ ಮಾಜಪೇಯಿ ಅವರ ಮಿಷನ್ ಜಾರಿಗೆ ತರಲಿ' ಎಂದು ಆಡ್ವಾಣಿ ಹೇಳಿದ್ದಾರೆ.
ಇನ್ನು ಮೋದಿಯ ದಿಢೀರ್ ಪಾಕಿಸ್ತಾನ ಭೇಟಿಯನ್ನು ಸ್ವಾಗತಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಇಂತಹ ನಿರ್ಧಾರಗಳು ಭಾರತ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂದವ್ಯ ಹೊಂದಲು ಬದ್ಧವಾಗಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.
ಪ್ರಧಾನಿ ಮೋದಿಯ ನಡೆ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂದವ್ಯ ಹೊಂದುವ ಸಕಾರಾತ್ಮಕ ಸಂದೇಶ ನೀಡಿದೆ ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.
SCROLL FOR NEXT