ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ದೂರು
ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಮೇಯರ್ ಮಂಜುನಾಥ್ ರೆಡ್ಡಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಎಸಿಎಂಎಂ...
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಮೇಯರ್ ಮಂಜುನಾಥ್ ರೆಡ್ಡಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಎಸಿಎಂಎಂ ಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದಾರೆ.
ಮಂಜುನಾಥ್ ರೆಡ್ಡಿ ಚುನಾವಣೆಗೆ ಸ್ಪರ್ಧಿಸುವ ವೇಳೆ ನಾನು ಪಾನ್ ಕಾರ್ಡ್ ಹೊಂದಿಲ್ಲ. ಕಂದಾಯ ಕಟ್ಟಿಲ್ಲ ಎಂದು ಸುಳ್ಳು ಪ್ರಮಾಣಪತ್ರ ನೀಡಿ ಚು. ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ರೆಡ್ಡಿ ಅವರು ಪಾವಗಡ ಸಹಕಾರಿ ಬ್ಯಾಂಕ್ ನಲ್ಲಿ 28 ಲಕ್ಷ ಹಾಗೂ ಐಸಿಐಸಿಐ ಬ್ಯಾಂಕ್ ನಲ್ಲಿ 5 ಲಕ್ಷ ಪಡೆದಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಚು.ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮೇಯರ್ ವಿರುದ್ಧ ಕೋರ್ಟ್ ಲ್ಲಿ ದೂರು ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಡಿ.30ರಂದು ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.