ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಮುಂದಿನ ಶೈಕ್ಷಣಿಕ ವರ್ಷದಿಂದ 'ಶೂ ಭಾಗ್ಯ': ಸಚಿವ ಸಂಪುಟ ಒಪ್ಪಿಗೆ

ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ 'ಶೂ ಭಾಗ್ಯ' ಯೋಜನೆ ಜಾರಿಗೆ ತರಲು ಸೋಮವಾರ ಸಚಿವ ಸಂಪುಟ...

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ 'ಶೂ ಭಾಗ್ಯ' ಯೋಜನೆ ಜಾರಿಗೆ ತರಲು ಸೋಮವಾರ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 120 ಕೋಟಿ ವೆಚ್ಚದ ಶೂ ಭಾಗ್ಯ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಎಸ್‌ಡಿಎಂಸಿ ಮೂಲಕ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.
ಒಟ್ಟು 48 ಲಕ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಈ 'ಶೂ ಭಾಗ್ಯ' ಯೋಜನೆಯ ಲಾಭ ದೊರೆಯಲಿದ್ದು, 1ರಿಂದ 5ನೇ ತರಗತಿವರೆಗಿನ ಪ್ರತಿ ವಿದ್ಯಾರ್ಥಿಗೆ 225 ರುಪಾಯಿ, 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ 250 ಹಾಗೂ 9, 10ನೇ ತರಗತಿ ಮಕ್ಕಳಿಗೆ 275 ರುಪಾಯಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.
ಇನ್ನು ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅವಧಿಯನ್ನು 2016 ಜನವರಿ 1ರಿಂದ ಒಂದು ವರ್ಷಗಳ ಕಾಲ ವಿಸ್ತರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!