ಸಾಂದರ್ಭೀಕ ಚಿತ್ರ 
ಪ್ರಧಾನ ಸುದ್ದಿ

ಹೊಸ ವರ್ಷಾಚರಣೆ ವೇಳೆ ಮೋದಿ, ಸಂಸತ್ ಮೇಲೆ ದಾಳಿಗೆ ಎಲ್ಇಟಿ ಸಂಚು: ಹೈಅಲರ್ಟ್ ಘೋಷಣೆ

ಹೊಸ ವರ್ಷಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನ ಹಾಗೂ ಅಣು ಸ್ಥಾವರಗಳ ಮೇಲೆ ಲಷ್ಕರ್ ಇ ತೊಯಿಬಾ ಉಗ್ರರು...

ನವದೆಹಲಿ: ಹೊಸ ವರ್ಷಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನ ಹಾಗೂ ಅಣು ಸ್ಥಾವರಗಳ ಮೇಲೆ ಲಷ್ಕರ್ ಇ ತೊಯಿಬಾ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಆ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಹಾಗೂ ಕೇಂದ್ರಾಡಳಿ ಪ್ರದೇಶಗಳಿಗೆ ಸೂಚನೆ ನೀಡಿದೆ.
ಮಾಧ್ಯಮಗಳ ವರದಿಗಳ ಪ್ರಕಾರ, ವರ್ಷದ ಸಂಭ್ರಮದ ವೇಳೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದ್ದು, ಅದನ್ನು ವ್ಯವಸ್ಥಿತವಾಗಿ ವಿಫಲಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಹೊಸ ವರ್ಷಾಚರಣೆ ವೇಳೆ ಸ್ಫೋಟ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಭಾರತದೊಳಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ರೈಲ್ವೆ ನಿಲ್ದಾಣ, ಧಾರ್ಮಿಕ ಸ್ಥಳ, ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಗುಪ್ತಚರ ಇಲಾಖೆ ಸೂಚಿಸಿದೆ.
ಗುಪ್ತಚರ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ದೆಹಲಿ, ಮುಂಬೈ, ಕೋಲ್ಕತಾ, ಚೆನ್ನೈ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಪ್ರಮುಖ ಮಹಾನಗರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ