ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಬುದ್ದಿವಂತ ಮತದಾರ ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾನೆ: ಸಿಎಂ

ಡಿಸೆಂಬರ್ 27ರಂದು ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಗೆಲುವಿಗೆ ಕಾರಣವಾದ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಂಗಳೂರು: ಡಿಸೆಂಬರ್ 27ರಂದು ನಡೆದ ವಿಧಾನ ಪರಿಷತ್‌  ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಗೆಲುವಿಗೆ ಕಾರಣವಾದ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.

ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮತದಾರ ಮರುಳಾಗಿಲ್ಲ' ಎಂದರು. ಅಲ್ಲದೆ ಹೆಚ್ಚು ಸ್ಥಾನ ಗೆಲ್ಲಲು ಕಾರಣವಾಗಿರುವ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹಾಸದಲ್ಲಿ ಗೆಲ್ಲುವ ನಿರೀಕ್ಷೆಯಿರಲಿಲ್ಲ ,ಗೆಲುವು ನನಗೆ ಅಚ್ಚರಿ ತಂದಿದೆ.ನಾನು ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದೆ ಆದರೆ ಅಲ್ಪ ಮತಗಳಿಂದ ಸೋತಿದ್ದೇವೆ ಎಂದರು.

ಇದೇ ವೇಳೆ, 'ಕಾಂಗ್ರೆಸ್‌ ಬಿಜೆಪಿಗಿಂತ 1 ಸ್ಥಾನ ಹೆಚ್ಚಿಗೆ ಗೆದ್ದರು ರಾಜೀನಾಮೆ ನೀಡುತ್ತೇನೆ' ಎಂದಿದ್ದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ  'ಸಾರ್ವಜನಿಕವಾಗಿ ಏನು ಮಾತಾಡಿದ್ದಾರೆ ಅದಕ್ಕೆ ಬದ್ಧರಾಗಿರಬೇಕು ಎನು ಮಾಡಬೇಕು ಎಂದು ಅವರು ತೀರ್ಮಾನಿಸಲಿ' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!