ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಲಕ್ಷ್ಮಣ ರೇಖೆ ದಾಟಿದ ಅರವಿಂದ್ ಕೇಜ್ರಿವಾಲ್ ಸುಳ್ಳಿನ ಯಂತ್ರ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿ ಖಂಡಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿ ಖಂಡಿಸಿದೆ.

ಪ್ರಧಾನಮಂತ್ರಿಯವರ ಬಗ್ಗೆ ಖಂಡನೀಯ ಪದಗಳನ್ನು ಬಳಸಿರುವ ಕೇಜ್ರಿವಾಲ್ ದೇಶದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ದೆಹಲಿ ಜನತೆಯ ಆಶೋತ್ತರಗಳನ್ನು ಈಡೇರಿಸದ ಆಪ್ ಸರ್ಕಾರ ಜನರು ಇಟ್ಟಿದ್ದ ನಂಬಿಕೆಗಳಿಗೆ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ಟೀಕಿಸಿದೆ.ಇನ್ನು ಡಿಡಿಸಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಜೈಟ್ಲಿ ವಿರುದ್ಧ ಮಾತನಾಡಿರುವ ಕೇಜ್ರಿವಾಲ್ ಜೈಲಿಗೆ ಹೋಗಲು ಸಿದ್ಧವಾಗಲಿ ಎಂದು ಹೇಳಿದೆ.

ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿರುವ ಕೇಜ್ರಿವಾಲ್ ಲಕ್ಷ್ಮಣ ರೇಖೆಯನ್ನು ದಾಟಿದ್ದಾರೆ. ಜನರ ಹಿತವನ್ನು ಕಡೆಗಣಿಸುತ್ತಿದ್ದಾರೆ. ಭ್ರಷ್ಟ ಅಧಿಕಾರಿಯನ್ನು ರಕ್ಷಿಸಲು ಹೋಗಿ ದೇಶದ ಜನತೆಯನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ಆಪಾದಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT