ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜಯಲಲಿತಾ ಮರು ಆಯ್ಕೆ

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮತ್ತೆ ಪ್ರಧಾನ ಕಾರ್ಯದರ್ಶಿಯಾಗಿ ಗುರುವಾರ ಮರು ಆಯ್ಕೆಯಾಗಿದ್ದಾರೆ...

ಚೆನ್ನೈ: ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮತ್ತೆ ಪ್ರಧಾನ ಕಾರ್ಯದರ್ಶಿಯಾಗಿ ಗುರುವಾರ ಮರು ಆಯ್ಕೆಯಾಗಿದ್ದಾರೆ.

ಇಂದು ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಜಯಲಲಿತಾ ಅವರನ್ನು ಸತತ 7 ನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.  2016ರಲ್ಲಿ ವಿಧಾನಸಭಾ ಚುನಾವಣೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಜಯಲಲಿತಾ ಅವರು ಈಗಾಗಲೇ ಪಕ್ಷದ ಸದಸ್ಯರನ್ನು ಸಭೆಗೆ ಕರೆದಿದ್ದು, ತಿರುಮನ್ಮೂಯೂರ್ ನಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಸಭೆ ವೇಳೆ ಜಯಲಲಿತಾ ಅವರು 14 ನಿರ್ಣಯಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಚೆನ್ನೈ ಪ್ರವಾಹದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿದ್ದಾರೆಂದು ತಿಳಿದುಬಂದಿದೆ. ಇದಲ್ಲದೆ, ಭಾರತೀಯ ಮೀನುಗಾರರ ಮೇಲೆ ದೌರ್ಜನ್ಯವೆಸಗುತ್ತಿರುವ ಶ್ರೀಲಂಕಾದೊಂದಿಗೆ ಮಾತುಕತೆ ನಡೆಸುವಂತೆ ಹಾಗೂ ವಿವಾದಿತ ಜಲ್ಲಿಕಟ್ಟು ನಿಷೇಧವನ್ನು ತೆರವುಗೊಳಿಸುವಂತೆ ಕೇಂದ್ರ ಬಳಿ ಮನವಿ ಮಾಡುವುದರ ಕುರಿತಂತೆ ಮಾತುಕತೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ