ಪ್ರಧಾನ ಸುದ್ದಿ

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ

Lingaraj Badiger

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಕಾಲ ಯೋಜನೆ ಯಶಸ್ವಿಯಾಗಿದ್ದು, ಈ ಯೋಜನೆಯಡಿ 50ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ಸೋಮವಾರ ಹೇಳಿದ್ದಾರೆ.

ಇಂದು ಹೊಸವರ್ಷದ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಾಪಾಲರು, ರಾಜ್ಯ ಸರ್ಕಾರ ಜನಸ್ನೇಹಿ, ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ ಮತ್ತು ಜನರ ಮನೆ ಬಾಗಿಲಿಗೆ ಯೋಜನೆ ಕೊಂಡೊಯ್ಯಲು ಸರ್ಕಾರ ಶ್ರಮಿಸಲಿದೆ ಎಂದು ಹೇಳಿದರು.

ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಹೇಳುವ ಮೂಲಕ ತಮ್ಮ ಭಾಷಣ ಆರಂಭಿಸಿದ ವಜುಭಾಯಿ ವಾಲಾ ಅವರು ಕರ್ನಾಟಕ ವಿಧಾಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಿಂದಿಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

10 ದಿನಗಳ ಕಾಲ ನಡೆಯುವ ವಿಧಾನ ಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಫೆಬ್ರುವರಿ 13ರವರೆಗೆ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಅರ್ಕಾವತಿ ಅಕ್ರಮ ಡಿನೋಟಿಫಿಕೇಶನ್ ಸೇರಿದಂತೆ ಹಲವು ವಿಚಾರಗಳ ಕುರಿತು ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಜುಭಾಯಿ ವಾಲಾ ಭಾಷಣದ ಮುಖ್ಯಾಂಶಗಳು
ರಾಜ್ಯದಲ್ಲಿ 10,269 ಕಿ.ಮೀ. ಹೆದ್ದಾರಿ ನಿರ್ಮಾಣ
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಜಾರಿ, ಈ ಯೋಜನೆಯಡಿ 2156
ರೇಲ್ವೆ ಯೋಜನೆಗಳಿಗೆ ಉಚಿತ ಭೂ ಮಂಜೂರಾತಿ
ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮ
ಪೋಕ್ಸೋ ಕೋರ್ಟ್ ವಿಶೇಷ ಅಭಿಯೋಜಕರ ನೇಮಕಾತಿಗೆ ತ್ವರಿತ ಕ್ರಮ
ಮೊಬೈಲ್ ಒನ್ ಯೋಜನೆ ಯಶಸ್ವಿ
ರಾಜೀವ್ ಆರೋಗ್ಯ ಭಾಗ್ಯ ಯೋಜನೆ ಜಾರಿ
ಅಪಘಾತಕ್ಕೊಳ್ಳಗಾದವರಿಗೆ ಸಿಎಂ ಸಾಂತ್ವಾನ ಯೋಜನೆ
ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಒತ್ತು, 371(ಜೆ) ಅಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

SCROLL FOR NEXT