ಪ್ರವೀಣ್ ತೊಗಾಡಿಯಾ 
ಪ್ರಧಾನ ಸುದ್ದಿ

ಬೆಂಗಳೂರಿಗೆ ಬರದಂತೆ ಪ್ರವೀಣ್ ತೊಗಾಡಿಯಾಗೆ ನಿಷೇಧ

ಬೆಂಗಳೂರು: ವಿಶ್ವ ಹಿಂದೂ ಪರಿಷತ್‌ನ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶಿಸದಂತೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ.

ಫೆಬ್ರವರಿ 8ರಂದು ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಲು ತೊಗಾಡಿಯಾ ಬೆಂಗಳೂರಿಗೆ ಬರುತ್ತಿದ್ದರು. ಆದರೆ ತೊಗಾಡಿಯಾ ಅವರು ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ತೊಗಾಡಿಯಾ ನಗರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಆದೇಶದನ್ವಯ ಪ್ರವೀಣ್ ತೊಗಾಡಿಯಾ ಅವರು ಫೆಬ್ರವರಿ 5ರಿಂದ ಫೆಬ್ರುವರಿ 10ರವರೆಗೆ ಬೆಂಗಳೂರು ನಗರಕ್ಕೆ ಪ್ರವೇಶ ಮಾಡುವಂತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!