ಅರವಿಂದ್ ಕೇಜ್ರಿವಾಲ್ ಮತ್ತು ಕಿರಣ್ ಬೇಡಿ 
ಪ್ರಧಾನ ಸುದ್ದಿ

ದೆಹಲಿ ಸಿಎಂ ಸ್ಥಾನಕ್ಕೆ ಕೇಜ್ರಿವಾಲ್‌ ಅರ್ಹ ವ್ಯಕ್ತಿ: ಸಮೀಕ್ಷೆ

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಮೂರು ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಜೀ ಮಾಧ್ಯಮ ಸಮೂಹಸಂಸ್ಥೆ ...

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಮೂರು ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಜೀ ಮಾಧ್ಯಮ ಸಮೂಹಸಂಸ್ಥೆ ಮತ್ತು ತಲೀಂ ರಿಸರ್ಚ್ ಫೌಂಡೇಶನ್  ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ದೆಹಲಿ ಜನತೆ ಹೆಚ್ಚು ಒಲವು ತೋರಿರುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 39.7 ಶೇ ಮತಗಳು ಲಭಿಸಲಿವೆ. ಅದೇ ವೇಳೆ ಆಮ್ ಆದ್ಮಿ ಪಕ್ಷಕ್ಕೆ  ಶೇ. 46 ಮತಗಳು ಲಭಿಸುವ ಸಾಧ್ಯತೆಯಿದ್ದು, ಕಾಂಗ್ರೆಸ್‌ಗೆ ಕೇವಲ 14.3 ಶೇ. ಲಭಿಸುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಜೀ ಮಾಧ್ಯಮ ಮತ್ತು ತಲೀಂ ನಡೆಸಿದ ಸಮೀಕ್ಷೆಯ ಪ್ರಕಾರ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಪಟ್ಟಕ್ಕೆ ಅರ್ಹ ವ್ಯಕ್ತಿ ಎಂದು ಶೇ. 49 ಜನ ಅಭಿಪ್ರಾಯ ಪಟ್ಟಿದ್ದಾರೆ. ಅದೇ ವೇಳೆ ಬಿಜೆಪಿ ಅಭ್ಯರ್ಥಿ ಕಿರಣ್ ಬೇಡಿ ಅವರು ಈ ಸ್ಥಾನಕ್ಕೆ ಅರ್ಹರು ಎಂದು  ಶೇ. 40 ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ನಡುವೆ ಶೇ. 10 ಜನರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮೆಕೇನ್ ಸಿಎಂ ಸ್ಥಾನಕ್ಕೆ ಯೋಗ್ಯರು ಎಂದು ಹೇಳಿದ್ದಾರೆ.

ಆದಾಗ್ಯೂ, ಆಪ್ 34 ಸ್ಥಾನಗಳನ್ನು ಹಾಗೂ ಬಿಜೆಪಿ 32 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಮಾತ್ರವಲ್ಲದೆ ಕೇಜ್ರಿವಾಲ್ ಮತ್ತು ಕಿರಣ್ ಬೇಡಿ ತಮ್ಮ ಕ್ಷೇತ್ರದಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಕೇಜ್ರಿವಾಲ್ ಕಣಕ್ಕಿಳಿದಿದ್ದು, ಬಿಜೆಪಿ ಬಲಿಷ್ಠವಾಗಿರುವ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಿಂದ ಕಿರಣ್ ಬೇಡಿ ಕಣಕ್ಕಿಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!