ಜಿತನ್ ರಾಮ್ ಮಾಂಝಿ 
ಪ್ರಧಾನ ಸುದ್ದಿ

ಫೆಬ್ರವರಿ ೨೦ಕ್ಕೆ ಬಹುಮತ ಸಾಬೀತುಪಡಿಸುವಂತೆ ಬಿಹಾರದ ಮುಖ್ಯಮಂತ್ರಿಗೆ ರಾಜ್ಯಪಾಲರ ಸೂಚನೆ

ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ ೨೦ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ ೨೦ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ.

"ಫೆಬ್ರವರಿ ೨೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ ಅಧಿವೇಶನದಲ್ಲಿ ಮಾಂಝಿ ಅವರು ಬಹುಮತ ಸಾಬೀತುಪಡಿಸಬೇಕು" ಎಂದು ರಾಜಭವನದ ಮೂಲಗಳು ತಿಳಿಸಿವೆ.

ಆದರೆ ಮಾಂಝಿ ಸಲ್ಲಿಸಿದ್ದ ರಹಸ್ಯ ಮತದಾನ ಮನವಿಯನ್ನು ರಾಜ್ಯಪಾಲರು ಒಪ್ಪಿಕೊಂಡಿದ್ದಾರೆಯೆ ಎಂಬುದು ತಿಳಿದುಬಂದಿಲ್ಲ.
 
ನೆನ್ನೆ ಜೆಡಿಯು ನಾಯಕ ನಿತೀಶ್ ಕುಮಾರ್, ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಆರ್ ಜೆ ಡಿ ನಾಯಕ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಅಧಿನಾಯಕ ಮುಲಾಯಂ ಸಿಂಗ್ ಯಾದವ್ ಒಳಗೊಂಡಂತೆ ೧೩೦ ಶಾಸಕರ ಜೊತೆ ದೆಹಲಿಯ ರಾಷ್ಟ್ರಪತಿ ಭವನದ ಎದುರು ಪೆರೇಡ್ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸಿದ ಹಿನ್ನಲೆಯಲ್ಲಿ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!