ಬಿಬಿಎಂಪಿ 
ಪ್ರಧಾನ ಸುದ್ದಿ

ವೆಬ್‍ಸೈಟ್ ಮೂಲಕ ದೂರು ನೀಡಿ

ಬೆಂಗಳೂರು: ಪಾದಚಾರಿ ಮಾರ್ಗಗಳ ಒತ್ತುವರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ಬಿಬಿಎಂಪಿ ವೆಬ್‍ಸೈಟ್‍ನಲ್ಲಿ ಪ್ರತ್ಯೇಕ ಆಯ್ಕೆ ಸೃಷ್ಟಿಸಲಾಗಿದೆ.

ಪಾದಚಾರಿ ಮಾರ್ಗದಲ್ಲಿನ ಒತ್ತುವರಿಗೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ನಡೆದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಬಿಬಿಎಂಪಿಗೆ ಈ ಸಲಹೆ ನೀಡಿತ್ತು. ಒತ್ತುವರಿಯಾಗಿರುವ ಅಥವಾ ಹಾಳಾಗಿರುವ ಪಾದಚಾರಿ ಮಾರ್ಗಗಳ ಛಾಯಾಚಿತ್ರ ತೆಗೆದು ಬಿಬಿಎಂಪಿ ವೆಬ್‍ಸೈಟ್‍ನಲ್ಲಿ ಹಾಕಿ ದೂರು ಸಲ್ಲಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಬೇಕು ಎಂದು ಹೈಕೋರ್ಟ್ ವಿಚಾರಣೆ ವೇಳೆ ಸಲಹೆ ನೀಡಿತ್ತು.

www.bbmp.gov.in ನಲ್ಲಿ ಈ ಆಯ್ಕೆ  ಸೃಷ್ಟಿಸಲಾಗಿದ್ದು, ಸಾರ್ವಜನಿಕರು ತಮ್ಮ ಸ್ಥಳೀಯ ಪ್ರದೇಶದಲ್ಲಾಗಿರುವ ಒತ್ತುವರಿ ಬಗ್ಗೆ ದೂರು ಸಲ್ಲಿಸಬಹುದು. ದೂರು ನೀಡುವವರು ತಮ್ಮ ವಿಳಾಸ, ದೂರವಾಣಿ ಸಂಖ್ಯೆ ಬರೆದು, ಯಾವ ಸ್ಥಳದಲ್ಲಿ ಒತ್ತುವರಿಯಾಗಿದೆ ಎಂದು ನಿಖರವಾಗಿ ಬರೆಯಬೇಕು. ಸ್ಥಳ ಗುರುತಿಸಿದ ನಂತರ ಒತ್ತುವರಿಯಾದ ಛಾಯಾಚಿತ್ರವನ್ನು ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!