ಎಂ.ಎನ್.ರೆಡ್ಡಿ 
ಪ್ರಧಾನ ಸುದ್ದಿ

ಚರ್ಚ್‌ಸ್ಟ್ರೀಟ್ ಸ್ಫೋಟ ಪ್ರಕರಣ: ಆರೋಪಿಗಳ ಖಚಿತ ಮಾಹಿತಿ ಲಭ್ಯ

ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೆಡ್ಡಿ, ಚರ್ಚ್‌ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಕುರಿತು ವಿಶೇಷ ತನಿಖಾ ತಂಡಕ್ಕೆ ಖಚಿತ ಮಾಹಿತಿ ಲಭ್ಯವಾಗಿದ್ದು, ಎರಡು ಗುಂಪುಗಳ ಮೇಲೆ ಬಲವಾದ ಶಂಕೆ ವ್ಯಕ್ತವಾಗಿದೆ ಎಂದರು. ಅಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಪ್ರಕರಣದ ತನಿಖೆಗೆ ಸಾಗಿದೆ ಎಂದು ರೆಡ್ಡಿ ತಿಳಿಸಿದರು.

2015ರ ಹೊಸ ವರ್ಷದ ಆಚರಣೆಗೆ ಬೆಂಗಳೂರು ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ ಫೆಬ್ರವರಿ 18ರಂದು ಯಲಂಹಕದ ವಾಯುನೆಲೆಯಲ್ಲಿ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ರೆಡ್ಡಿ ತಿಳಿಸಿದರು.

ಪ್ರದರ್ಶನಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಣ್ಯರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲಾ ಐಷಾರಾಮಿ ಹೋಟಲ್ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಸುಮಾರು 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel