ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯಾ 
ಪ್ರಧಾನ ಸುದ್ದಿ

ಎಎಪಿ ಮೊದಲ ದಿನ: ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶ ನಿರಾಕರಣೆ

ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೊದಲ ದಿನವಾದ ಇಂದು ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶವನ್ನು ನಿರಾಕರಿಸಲಾಗಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೊದಲ ದಿನವಾದ ಇಂದು ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶವನ್ನು ನಿರಾಕರಿಸಲಾಗಿದೆ.

ದಿನಪತ್ರಿಕೆ ಮತ್ತು ಟಿ ವಿ ಮಾಧ್ಯಮದ ಪತ್ರಕರ್ತರಿಬ್ಬರಿಗೂ ಪ್ರವೇಶ ನಿರಾಕರಿಸಲಾಯಿತು.

"ಪತ್ರಕರ್ತರನ್ನು ಒಳಗೆ ಬಿಡದಂತೆ ನಮಗೆ ಸರ್ಕಾರದ ಹಿರಿಯ ಅಧಿಕಾರಿಗಳಿಂದ ಆದೇಶವಿದೆ" ಎಂದು ಭದ್ರತಾ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಈ ಆದೇಶ ಮಾತಿನ ಆದೇಶ ಎಂದು ಅವರು ತಿಳಿಸಿದ್ದಾರೆ.

ಇದರ ಪ್ರತಿಕ್ರಿಯೆಗಾಗಿ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಸರ್ಕಾರ ಸುಮಾರು ೪:೩೦ ಘಂಟೆಗೆ ಸಭೆ ಸೇರಲಿದ್ದು ಕೂಡಲೆ ಮಾಡಬೇಕಾದ ಕೆಲಸಗಳ ಬಗ್ಗೆ ಸಂಪುಟ ಸದಸ್ಯರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ದೆಹಲಿ ಪೊಲೀಸ್ ಆಯುಕ್ತ ಬಿ ಎಸ್ ಬಸ್ಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೆಕ್ರೆಟರಿಯಟ್ ನಲ್ಲಿ ೧೧:೪೫ಕ್ಕೆ ಭೇಟಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!