ಮಲ್ಲಿಕಾರ್ಜುನ್ ಖರ್ಗೆ - ಪರಮೇಶ್ವರ 
ಪ್ರಧಾನ ಸುದ್ದಿ

ದಲಿತ ನಾಯಕನಿಗೆ ಸಿಎಂ ಪಟ್ಟ: ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ...

ಬೆಂಗಳೂರು: ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಲು ಇಂದು ನಗರದಲ್ಲಿ 18 ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದರು.

ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಖದ್ದು ಪರಮೇಶ್ವರ ಅವರೂ ಭಾಗವಹಿಸಿದ್ದು, ದಲಿತರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಸಭೆಯಲ್ಲಿ ಬಲವಾಗಿ ಕೇಳಿಬಂತು. ಅಲ್ಲದೆ ಈ ಸಂಬಂಧ ಹೈಕಮಾಂಡ್ ಮೇಲೆ ಒತ್ತಡ ಹಾಕುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಮಾರ್ಚ್ ಅಂತ್ಯದ ಒಳಗೆ ಹೈಕಮಾಂಡ್ ಈ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಬೇಕು. ಇಲ್ಲದಿದ್ದರೆ ಹೋರಾಟದ ಹಾದಿ ತುಳಿಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ