ವೆಂಕಯ್ಯ ನಾಯ್ಡು 
ಪ್ರಧಾನ ಸುದ್ದಿ

ಅಸಂಸದೀಯ ಪದಗಳನ್ನು ಬಳಸಿಲ್ಲ: ವೆಂಕಯ್ಯ ನಾಯ್ಡು

ತಾನು ಲೋಕಸಭೆಯಲ್ಲಿ ಅಸಂಸದೀಯ ಪದಗಳನ್ನು ಬಳಸಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ...

ನವದೆಹಲಿ: ತಾನು ಲೋಕಸಭೆಯಲ್ಲಿ ಅಸಂಸದೀಯ ಪದಗಳನ್ನು ಬಳಸಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಲೋಕಸಭೆಯಲ್ಲಿಂದು ವಿಪಕ್ಷಗಳು ಗದ್ದಲವೆಬ್ಬಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ನಾಯ್ಡು ನಾನು ವಿಪಕ್ಷಗಳನ್ನು ಗೌರವಿಸುತ್ತೇನೆ. ನಾನು ಇಲ್ಲಿ ಯಾವುದೇ ಅಸಂಸದೀಯ ಪದಗಳನ್ನು ಬಳಸಿಲ್ಲ ಎಂದು ಹೇಳಿದ್ದಾರೆ.

ಯಾರಿಗೂ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನಾನು ಆ ಹೇಳಿಕೆಯನ್ನು ನೀಡುವಾಗ ನನ್ನ ಮನಸ್ಸಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಮೇಲೆ ದ್ವೇಷ ಇರಲಿಲ್ಲ ಎಂದು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಲೋಕಸಭೆಯಲ್ಲಿ ರೈಲ್ವೇ ಬಜೆಟ್ ಮಂಡನೆಯ ಮುನ್ನ ಮಾತನಾಡಿದ ನಾಯ್ಡು ಅಲ್ಪಸಂಖ್ಯಾತರಿಗೆ ಬಹುಸಂಖ್ಯಾತರನ್ನು ತುಳಿಯಲು ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ವಿಪಕ್ಷಗಳು ಖಂಡಿಸಿದ್ದು ನಾಯ್ಡು ಅವರು ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದಿದ್ದವು.  ಮಾತ್ರವಲ್ಲದೆ ರೈಲ್ವೇ ಬಜೆಟ್ ಭಾಷಣಕ್ಕೆ ತಾವು ತಡೆಯೊಡ್ಡುವುದಾಗಿ ಬೆದರಿಕೆಯನ್ನು ನೀಡಿದ್ದವು.

ಇದರಿಂದಾಗಿ ಸದನದಲ್ಲಿ ಗದ್ದಲ ಸೃಷ್ಟಿಯಾಗಿದ್ದು 11.30ರ ವರೆಗೆ ಕಲಾಪವನ್ನು ಮುಂದೂಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT