ಅಮಿತ್ ಶಾ 
ಪ್ರಧಾನ ಸುದ್ದಿ

ಪಿಕೆ ವಿವಾದ; ಪ್ರತಿಭಟಿಸುವ ಹಕ್ಕು ಜನರಿಗಿದೆ: ಅಮಿತ್ ಶಾ

ಅಮಿರ್ ಖಾನ್ ಅಭಿನಯದ ಪಿಕೆ ಚಿತ್ರಕ್ಕೆ ಹಿಂದೂ ಸಂಘಟನೆಗಳಿಂದ ವ್ಯಾಪಕ ಟೀಕೆ, ಪ್ರತಿಭಟನೆಗಳು ನಡೆದು...

ಮುಂಬೈ: ಅಮಿರ್  ಖಾನ್ ಅಭಿನಯದ ಪಿಕೆ ಚಿತ್ರಕ್ಕೆ ಹಿಂದೂ ಸಂಘಟನೆಗಳಿಂದ ವ್ಯಾಪಕ ಟೀಕೆ, ಪ್ರತಿಭಟನೆಗಳು ನಡೆದುಬರುತ್ತಿವೆ. ಈ ಬಗ್ಗೆ ನೀವೇನಂತೀರಿ? ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಲ್ಲಿ ಕೇಳಿದಾಗ, ಜನರಿಗೆ ಪ್ರತಿಭಟಿಸುವ ಸ್ವಾತಂತ್ರ್ಯ ಇದೆ ಎಂದು ಉತ್ತರಿಸಿದ್ದಾರೆ.
 
ಅದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆ ಬಗ್ಗೆ  ಪಿಡಿಪಿ ಮತ್ತು ಎನ್‌ಸಿ ಪಕ್ಷದ ಜತೆಗೆ ನಡೆದ ಮಾತುಕತೆಯ ಬಗ್ಗೆ ಮಾತನಾಡಿದ ಶಾ, ಎರಡೂ ಪಕ್ಷಗಳ ಜತೆ ಮಾತುಕತೆ ನಡೆದಿದೆ. ಆದರೆ ಇಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ. ಆದಾಗ್ಯೂ, ನಾವು ಜಮ್ಮು ಕಾಶ್ಮೀರದಲ್ಲಿ ನಾವೇ ಸರ್ಕಾರ ರಚಿಸಬೇಕೆಂದಿದ್ದೇವೆ ಎಂದಿದ್ದಾರೆ.

ಮರು ಮತಾಂತರ ಮಾಡುವ 'ಘರ್‌ವಾಪಸಿ' ಅಭಿಯಾನದ ಬಗ್ಗೆ ಕೇಳಿದಾಗ, ಎನ್‌ಡಿಎ ಸರ್ಕಾರ ಬಲವಂತದ ಮತಾಂತರ ವಿರುದ್ಧ ಕಾನೂನನ್ನು ತರಲು ಸಿದ್ಧತೆ ನಡೆಸಿದೆ ಎಂದು ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT