ಸಲ್ಮಾನ್ ಮುಂಬೈ ನಿವಾಸದ ಎದುರು ತಮಿಳು ಸಂಘಟನೆಗಳ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಟ ಸಲ್ಮಾನ್ ವಿರುದ್ಧ ತಮಿಳು ಸಂಘಟನೆಗಳ ಪ್ರತಿಭಟನೆ

ಇತ್ತೀಚೆಗಷ್ಟೆ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಸಲ್ಮಾನ್ ಖಾನ್ ವಿರುದ್ದ ತಮಿಳು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಂಬೈ: ಇತ್ತೀಚೆಗಷ್ಟೆ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಸಲ್ಮಾನ್ ಖಾನ್ ವಿರುದ್ದ ತಮಿಳು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಎದುರು ತಮಿಳು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ನಟ ಸಲ್ಮಾನ್ ವಿರುದ್ಧ ಘೋಷಣೆಗಳನ್ನು ಕೂಗುತ್ತಿವೆ. ಇನ್ನು ತಮಿಳು ನಾಡಿನಾದ್ಯಂತ ಸಲ್ಮಾನ್ ಖಾನ್ ಚಿತ್ರವನ್ನು ನಿಷೇಧಿಸುವಂತೆಯೂ ಕೂಡ ತಮಿಳು ಸಂಘಟನೆಗಳು ಆಗ್ರಹಿಸುತ್ತಿವೆ.

ಶ್ರೀಲಂಕಾದಲ್ಲಿದ್ದ ಎಲ್ ಟಿಟಿಇ ಸಂಘಟನೆಯ ವಿರುದ್ಧ ಯುದ್ಧ ಸಾರಿದ್ದ ರಾಜಪಕ್ಸೆ ಸರ್ಕಾರ ಅದರಲ್ಲಿ ಯಶಸ್ವಿ ಕೂಡ ಆಗಿತ್ತು. ಈ ಕಾರ್ಯಾಚರಣೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಭಾರತದ ತಮಿಳು ಸಂಘಟನೆಗಳು ಲಂಕಾ ತಮಿಳರಿಗೆ ರಾಜಪಕ್ಸೆ ಸರ್ಕಾರವು ಅನ್ಯಾಯವೆಸುಗುತ್ತಿದೆ ಎಂದು ಆರೋಪ ಮಾಡುತ್ತಾ ಬಂದಿವೆ.

ಇನ್ನು ತಮಿಳು ಚಿತ್ರರಂಗದ ಯಾವ ನಟರು  ಕೂಡ ಶ್ರೀಲಂಕಾದಲ್ಲಿ ಚಿತ್ರೀಕರಣವನ್ನು ಮಾಡಬಾರದಂತೆಯೂ ಮತ್ತು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತಾಕೀತು ಮಾಡಲಾಗಿತ್ತು. ಸ್ವತಃ ತಮಿಳು ಚಿತ್ರರಂಗವೇ ಶ್ರೀಲಂಕಾದಲ್ಲಿ ಚಿತ್ರೀಕರಣ ನಡೆಸುವ ಮತ್ತು ಲಂಕಾಗೆ ಹೋಗಿ ನಟಿಸುವ ನಟರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು.

ಸಲ್ಮಾನ್ ಖಾನ್ ಜೊತೆಯಲ್ಲಿ ರೆಡಿ ಚಿತ್ರದಲ್ಲಿ ಶ್ರೀಲಂಕಾಗೆ ಹೋಗಿ ನಟಿಸಿದ್ದ ನಟಿ ಆಸಿನ್ ರ ಮೇಲೆ ಕೂಡ ತಮಿಳು ಚಿತ್ರರಂಗ ನಿಷೇಧ ಹೇರಿತ್ತು. ಇದೀಗ ನಟ ಸಲ್ಮಾನ್ ಖಾನ್ ವಿರುದ್ಧ ತಮಿಳು ಸಂಘಟನೆಗಳು ಕೆಂಗಣ್ಣು ಬೀರಿದ್ದು, ತಮಿಳುನಾಡಿನಾಧ್ಯಂತ ಸಲ್ಮಾನ್ ಅವರ ಚಿತ್ರಗಳನ್ನು ನಿಷೇಧಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!