ಶಶಿ ತರೂರ್ 
ಪ್ರಧಾನ ಸುದ್ದಿ

ಸುನಂದಾ ಸಾವು ದುಷ್ಕೃತ್ಯವೆಂದು ನಾನು ಊಹಿಸಿರಲಿಲ್ಲ: ಶಶಿ ತರೂರ್

ಮಾಜಿ ಕೇಂದ್ರ ಸಚಿವ ಹಾಗು ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಸಹಜ ಸಾವು ಅಲ್ಲ...

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗು ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಸಹಜ ಸಾವು ಅಲ್ಲ, ಅದೊಂದು ಕೊಲೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಅವರನ್ನು ಕೂಡಾ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ಸುನಂದಾ ಪುಷ್ಕರ್ ಅವರದ್ದು ಅಸಹಜ ಸಾವು ಎಂಬ ಸುದ್ದಿ ಶಶಿ ತರೂರ್‌ನ್ನು ಬೆಚ್ಚಿ ಬೀಳಿಸಿದೆ. ಈ ಬಗ್ಗೆ ಶಶಿ ತರೂರ್ ತಮ್ಮ ಫೇಸ್‌ಬುಕ್ ಅಧಿಕೃತ ಪುಟದಲ್ಲಿ "ನನ್ನ ಪತ್ನಿ ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅನಾಮಿಕ ವ್ಯಕ್ತಿಯೊಬ್ಬರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂಬ ವಿಷಯ ತಿಳಿದು ನಾನು ಆಶ್ಚರ್ಯಚಕಿತನಾಗಿದ್ದೇನೆ. ಪ್ರಸ್ತುತ ಪ್ರಕರಣದ ತನಿಖೆ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ನನಗೆ ಕುತೂಹಲವಿದೆ ಮಾತ್ರವಲ್ಲದೆ ತನಿಖೆಗೆ ನನ್ನ ಸಂಪೂರ್ಣ ಸಹಕಾರವಿದೆ. ನನ್ನ ಪತ್ನಿಯ ಸಾವು ದುಷ್ಕೃತ್ಯವಾಗಿರಬಹುದೆಂದು ನಾನು ಊಹಿಸಿರಲಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಾಗಿದ್ದು, ಸತ್ಯಾಸತ್ಯತೆ ಆದಷ್ಟು ಬೇಗ ಹೊರಬರಬೇಕಾಗಿದೆ.

ಇತ್ತೀಚೆಗೆ ನಾನು ಸುನಂದಾ ಅವರ ಕುಟುಂಬವನ್ನು ಭೇಟಿ ಮಾಡಿ, ಅವರಿಂದ ಎಲ್ಲ ವಿವರಗಳನ್ನು ಪಡೆದುಕೊಂಡಿದ್ದೇನೆ.  ಸುನಂದಾ ಅವರ ಮರಣೋತ್ತರ ಪರೀಕ್ಷೆಯ ಪ್ರತಿ ಹಾಗೂ ಈ ಬಗ್ಗೆ ತನಿಖೆ ನಡೆಸಿದ ಸಿಎಫ್‌ಎಸ್ ಎಲ್  ವರದಿಯ ಪ್ರತಿ ಇಲ್ಲಿಯವರೆಗೆ ನಮ್ಮ ಕೈಸೇರಿಲ್ಲ. ಈ ಎಲ್ಲ ವರದಿಗಳ ಪ್ರತಿಗಳನ್ನು ನಮಗೆ ಆದಷ್ಟು ಬೇಗ ನೀಡಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ''ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT