ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ 
ಪ್ರಧಾನ ಸುದ್ದಿ

ಶಂಕಿತ 3 ಆರೋಪಿಗಳ ಬಂಧನ; ಸ್ಫೋಟಕ ಸಾಮಾಗ್ರಿ ವಶ

ಬೆಂಗಳೂರಿನ ಚರ್ಚ್ ರಸ್ತೆಯಲ್ಲಿ ಡಿಸೆಂಬರ್ 28ರಂದು ನಡೆದ ಬಾಂಬ್ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ 3 ಶಂಕಿತ...

ಬೆಂಗಳೂರು: ಬೆಂಗಳೂರಿನ ಚರ್ಚ್ ರಸ್ತೆಯಲ್ಲಿ ಡಿಸೆಂಬರ್ 28ರಂದು ನಡೆದ ಬಾಂಬ್ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ 3 ಶಂಕಿತ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ದಾಳಿ ನಡೆಸಿದ ಎನ್‌ಐಎ ತಂಡಕ್ಕೆ ಸ್ಫೋಟಕ ವಸ್ತುಗಳನ್ನು ಹೊಂದಿರುವ ಅಬ್ದುಲ್ ಸುಬೂರ್ (24) ಎಂಬಾತ ಸಿಕ್ಕಿ ಬಿದ್ದಿದ್ದಾನೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅದೇ ವೇಳೆ ಬೆಂಗಳೂರಿನಲ್ಲಿ ಸದ್ದಾಂ ಹುಸೇನ್ (35), ಸೈಯದ್ ಇಸ್ಮಾಯಿಲ್ ಅಫಕ್ (35) ಎಂಬ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳು ಭಟ್ಕಳದವರಾಗಿದ್ದಾರೆ. ಇವರು ಪುಲಿಕೇಶಿನಗರದ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಂದ ಮಹತ್ವದ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಗುರುವಾರ ಸಂಜೆ ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೆಡ್ಡಿ ಬಂಧಿತರು ನಿಷೇಧಿತ ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಜತೆ ಸಂಪರ್ಕದಲ್ಲಿದ್ದರು ಎಂದು ಹೇಳಿದ್ದಾರೆ.  ದಾಳಿ ವೇಳೆ ಪೊಲೀಸರಿಗೆ ಭಟ್ಕಳದ ಮನೆಯಲ್ಲಿ ಜಿಲೆಟಿನ್, ಅಮೋನಿಯಂ ನೈಟ್ರೇಟ್, ಟೈಮರ್, ಲ್ಯಾಪ್‌ಟಾಪ್ ಹಾಗೂ ಸಂವಹನ ಸಾಮಗ್ರಿಗಳು ಸಿಕ್ಕಿವೆ. ಈ ಮೂವರು ಬೆಂಗಳೂರಿನಲ್ಲಿ ವಾಸವಿದ್ದು, ಬೇರೆಯವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದರು ಎಂದು ರೆಡ್ಡಿ ಹೇಳಿದ್ದಾರೆ. ಆದಾಗ್ಯೂ, ಬಂಧಿತ ಆರೋಪಿಗಳಿಗೂ ಚರ್ಚ್ ರಸ್ತೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಮೇಲ್ನೋಟಕ್ಕೆ ಯಾವುದೇ ಸಂಬಂಧವಿಲ್ಲ ಅನಿಸುತ್ತಿದೆ. ಸ್ಫೋಟಕ್ಕೆ ಸಂಬಂಧವಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ ರೆಡ್ಡಿ ಬಂಧಿತ ಆರೋಪಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ