ಚರ್ಚ್ ಸ್ಟ್ರೀಟ್ ಸ್ಫೋಟ: ಶಂಕಿತ ಆರೋಪಿಗಳ ಬಂಧನ
2014 ಡಿಸೆಂಬರ್ 28ಕ್ಕೆ ಬೆಂಗಳೂರಿನ ಚರ್ಚ್ ರಸ್ತೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: 2014 ಡಿಸೆಂಬರ್ 28ಕ್ಕೆ ಬೆಂಗಳೂರಿನ ಚರ್ಚ್ ರಸ್ತೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತು ಗುಪ್ತಚರ ಸಂಸ್ಥೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಆರೋಪಿಗಳನ್ನು ಗುರುವಾರ ಭಟ್ಕಳದಲ್ಲಿ ಬಂಧಿಸಲಾಗಿದೆ.
ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಸಿಕ್ಕಿದ ಮಾಹಿತಿಯ ಮೇರೆಗೆ ಈ ಇಬ್ಬರು ಶಂಕಿತ ವ್ಯಕ್ತಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಇವರನ್ನು ಬೆಂಗಳೂರಿಗೆ ಕರೆತಂದು ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಲಾಗುವುದು.
ಭಟ್ಕಳ ನಿವಾಸಿಗಳಾದ ಸದ್ದಾಂ ಮತ್ತು ಮೊಹಮ್ಮದ್ ಆಸೀಫ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತ ಆರೋಪಿಗಳ ಮನೆಯಿಂದ ಕೆಲವೊಂದು ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿದ್ದು, ಇದು ಮುಂದಿನ ತನಿಖೆಗೆ ಸಹಾಯವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದೀಗ ಬಂಧನಕ್ಕೊಳಗಾಗಿರುವ ವ್ಯಕ್ತಿಗಳು ನಿಷೇಧಿತ ಉಗ್ರ ಸಂಘಟನೆಯಾದ ಇಂಡಿಯನ್ ಮುಜಾಹಿದ್ದೀನ್ಗೆ ಸೇರಿದವರೆಂದು ಶಂಕೆ ವ್ಯಕ್ತ ಪಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.