ಪ್ರಧಾನ ಸುದ್ದಿ

ಜಮ್ಮುನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್

Rashmi Kasaragodu

ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಸೋಮವಾರ ಇಲ್ಲಿನ ಹೀರಾನಗರ್ ಸೆಕ್ಟರ್‌ನಲ್ಲಿ ಪಾಕ್ ಗುಂಡಿನ ದಾಳಿ ನಡೆಸಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಪ್ರದೇಶದಲ್ಲಿ ಬಿಎಸ್‌ಎಫ್ ಪೋಸ್ಟ್‌ಗಳ ಮೇಲೆ ಪಾಕ್ ದಾಳಿ ನಡೆಸಿದೆ.

ಪಾಕ್ ದಾಳಿಗೆ ಭಾರತ ತಕ್ಕ ಉತ್ತರವನ್ನು ನೀಡಿದೆ.

ಕಳೆದ ಕೆಲವು ತಿಂಗಳಿಂದ ಪಾಕ್ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸಿ ದಾಳಿ ನಡೆಸುತ್ತಿದ್ದು, ಇದಕ್ಕೆ ಭಾರತವೂ ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಾ ಬರುತ್ತಿದೆ.

SCROLL FOR NEXT