ಮದನ್ ಮಿತ್ರ 
ಪ್ರಧಾನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರದ್ದೇ ಕೊನೆಯ ಮಾತು: ಮದನ್ ಮಿತ್ರ

ಶಾರದಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ

ಕೋಲ್ಕತ್ತಾ: ಶಾರದಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರ, ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರದ್ದೇ ಕೊನೆಯ ಮಾತು ಎಂದಿದ್ದಾರೆ.

ರಾಜ್ಯ ಆಡಳಿತದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಬರುವಾಗ ಅವರು ಈ ಮಾತುಗಳನ್ನಾಡಿದ್ದಾರೆ. "ಮುಂದಿನ ೨೦ ವರ್ಷಗಳವರೆಗೆ ಮಮತಾ ಬ್ಯಾನರ್ಜಿ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ" ಎಂದಿರುವ ಅವರು ಮುಂಬರಲಿರುವ ಲೋಕಸಭಾ ಮತ್ತು ವಿಧಾನ ಸಭಾ ಉಪಚುನಾವಣೆಗಳಲ್ಲಿ ತೃಣಮೂಲ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.

ಎಸ್ ಎಸ್ ಕೆ ಎಂ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ ಮದನ್ ಮಿತ್ರ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಬಹುಕೋಟಿ ಶಾರದಾ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಳೆದ ಡಿಸೆಂಬರ್ ನಲ್ಲಿ ಸಿಬಿಐ, ಮದನ್ ಮಿತ್ರಾ ಅವರನ್ನು ಬಂಧಿಸಿತ್ತು. ಸದ್ಯಕ್ಕೆ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT