ಜನಾರ್ಧನ ರೆಡ್ಡಿ 
ಪ್ರಧಾನ ಸುದ್ದಿ

ಜನಾರ್ದನ ರೆಡ್ಡಿಗೆ ಬಿಡುಗಡೆ ಭಾಗ್ಯ

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು...

ಬೆಂಗಳೂರು: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಒಟ್ಟು 40 ತಿಂಗಳ ಸೆರೆವಾಸದಿಂದ ಮುಕ್ತವಾಗಲಿರುವ ಜನಾರ್ದನ ರೆಡ್ಡಿ ನಾಳೆ ಜೈಲಿನಿಂದ ಹೊರಬರುವ ಸಾಧ್ಯತೆ ಇದೆ.

ಅಕ್ರಮ ಗಣಿಗಾರಿಕೆ ನಡೆಸಿ ಸಿಬಿಐ ಅಧಿಕಾರಿಗಳಿಂದ 2011 ಸೆಪ್ಟೆಂಬರ್ 5ರಂದು ಬಂಧನಕ್ಕೀಡಾಗಿದ್ದ ಜನಾರ್ದನ ರೆಡ್ಡಿ ವಿರುದ್ಧ ಒಟ್ಟು 7 ಪ್ರಕರಣಗಳ ದಾಖಲಾಗಿತ್ತು. ಈಗಾಗಲೇ 6 ಪ್ರಕರಣಗಳಲ್ಲಿ ರೆಡ್ಡಿಗೆ ಜಾಮೀನು ದೊರಕಿತ್ತು. ಇಂದು ಸುಪ್ರೀಂಕೋರ್ಟ್‌ನಲ್ಲಿ ಒಎಂಸಿ ಗಣಿ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ದೊರೆತಿದೆ. ಈ ಮೂಲಕ ಎಲ್ಲಾ ಪ್ರಕರಣಗಳಲ್ಲಿ ರೆಡ್ಡಿಗೆ ಜಾಮೀನು ದೊರೆತಿದೆ.

ಬಳ್ಳಾರಿಗೆ ಜನಾರ್ದನ ರೆಡ್ಡಿ ತೆರಳುವಂತಿಲ್ಲ, ದೇಶ ಬಿಟ್ಟು ತೆರಳುವಂತಿಲ್ಲ, ಯಾವುದೇ ಸಾಕ್ಷಿಗಳನ್ನು ಭೇಟಿ ಮಾಡದಂತೆ ಹಾಗೂ ಕೋರ್ಟ್‌ಗೆ ಪಾಸ್‌ಪೋರ್ಟ್ ಸಲ್ಲಿಸಬೇಕು ಎಂಬ ಷರತ್ತು ವಿಧಿಸಿದ್ದು, 20 ಲಕ್ಷ ರುಪಾಯಿ ಮೊತ್ತದ ಎರಡು ಶ್ಯೂರಿಟಿ ನೀಡಬೇಕು ಎಂದು ಸೂಚಿಸಿದೆ

ಒಟ್ಟಾರೆ ಜನಾರ್ದನ ರೆಡ್ಡಿ ಮೇಲಿದ್ದ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದ್ದು, ನಾಳೆ ಸಂಜೆಯೊಳಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!