ಮುಂಬೈಯ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯ (ಕೃಪೆ : ಸಿದ್ಧಿವಿನಾಯಕ ದೇವಾಲಯದ ವೆಬ್ಸೈಟ್ ) 
ಪ್ರಧಾನ ಸುದ್ದಿ

ಮುಂಬೈ ಸಿದ್ಧಿವಿನಾಯಕ ದೇಗುಲಕ್ಕೂ 'ಉಗ್ರ' ಬೆದರಿಕೆ

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿ ಹಿಂತಿರುಗುವ ಮುನ್ನ ದಾಳಿ ಮಾಡುತ್ತೇವೆ ಎಂಬ ಉಗ್ರರ...

ಮುಂಬೈ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿ ಹಿಂತಿರುಗುವ ಮುನ್ನ ದಾಳಿ ಮಾಡುತ್ತೇವೆ ಎಂಬ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಮುಂಬೈಯ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯವೂ ಇದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಮುಂಬೈಯಲ್ಲಿರುವ ಈ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜೆ ನಡೆಯುತ್ತಿದ್ದು, ಆ ದಿನ ಸುಮಾರು 60,000 ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಆ ದಿನವೇ ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಹಾರಾಷ್ಟ್ರ ಪೊಲೀಸರಿಗೆ ಸೂಚನೆ ನೀಡಿದೆ.

ಪಾಕಿಸ್ತಾನದ ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಮತ್ತು ಇನ್ನೊಂದು ಉಗ್ರ ಸಂಘಟನೆ ಒಬಾಮ ಭೇಟಿ ವೇಳೆ ಉಗ್ರ ಕೃತ್ಯಗಳನ್ನು ನಡೆಸುವ ಮೂಲಕ ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸಲು ಹೆಣಗಾಡುತ್ತಿದೆ. ಆದ್ದರಿಂದಲೇ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

2000 ಇಸ್ವಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಭಾರತಕ್ಕೆ ಭೇಟಿ ನೀಡಿದಾಗ  ಕಾಶ್ಮೀರದ ಒಂದು ಗ್ರಾಮದಲ್ಲಿ 26 ಸಿಖ್‌ರನ್ನು ಹತ್ಯೆಗೈಯ್ಯಲಾಗಿತ್ತು. ಆ ಕೃತ್ಯ ನಡೆಸಿದ್ದು ಲಷ್ಕರೆ ಮತ್ತು ಹಿಜ್‌ಬುಲ್ ಮುಜಾಹಿದ್ದೀನ್ ಸಂಘಟನೆ ಎಂದು ಭಾರತ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT