ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ನಾವೆಲ್ಲರೂ ಭಯೋತ್ಪಾದನೆ ವಿರುದ್ದ ಹೋರಾಡೋಣ: ವಜುಭಾಯಿ ವಾಲಾ

ನಗರದಲ್ಲಿ ಇಂದು ಗಣರಾಜ್ಯೋತ್ಸವದ ಸಂಭ್ರಮ. ಮಾಣಿಕ್ ಷಾ ಮೈದಾನದಲ್ಲಿ ಆಯೋಜಿಸಲಾಗಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ...

ಬೆಂಗಳೂರು: ನಗರದಲ್ಲಿ ಇಂದು ಗಣರಾಜ್ಯೋತ್ಸವದ ಸಂಭ್ರಮ. ಮಾಣಿಕ್ ಷಾ ಮೈದಾನದಲ್ಲಿ ಆಯೋಜಿಸಲಾಗಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ರೂಢಾಬಾಯಿ ವಾಲಾ ಧ್ವಜಾರೋಹಣ ಮಾಡಿದ್ದು, ಗೌರವ ವಂದನೆ ಸ್ವೀಕರಿಸಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರು, ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎನ್ನುವ ಮೂಲಕ ಕರ್ನಾಟಕದ ಜನತೆಗೆ ಗಣತಂತ್ರದ ಶುಭಾಶಯ ಕೋರಿದ್ದಾರೆ.  ಗಾಂಧೀಜಿ, ವಿವೇಕಾನಂದರು ದೇಶಕ್ಕಾಗಿ ಶ್ರಮಿಸಿದಂತವರು. ಇಂತಹ ಹಿರಿಯರ ಹಾದಿಯಲ್ಲಿ ನಾವು ಸಾಗಿ, ರಾಜ್ಯ ಮತ್ತು ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗೋಣ ಎಂದು ಕರೆ ನೀಡಿದ್ದಾರೆ.

ರಾಜ್ಯದಲ್ಲೂ ಗಣನೀಯ ಪ್ರಗತಿಯಾಗಿದೆ. ನಮ್ಮ ರೈತರು ಉತ್ಪಾದನೆ ಕ್ಷೇತ್ರದಲ್ಲಿ ರಾಷ್ಟ್ರವನ್ನು ಸ್ವಾಲಂಭಿಯಾಗಿಸಿದ್ದಾರೆ.

ಅನೇಕತೆಯಲ್ಲಿ ಏಕತೆ ಕಂಡ ರಾಷ್ಟ್ರ ಭಾರತ. ಪ್ರಜಾಪ್ರಭುತ್ವ ಕೇವಲ ನಿಷ್ಪಕ್ಷಪಾತ ಚುನಾವಣೆ ಅಲ್ಲ. ಒಳ್ಳೆಯ, ಪ್ರಗತಿಪರ ಆಡಳಿತ, ಎಲ್ಲರನ್ನೊಳಗೊಂಡ ಆಡಳಿತವಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಅಭಿವೃದ್ಧಿ ಹೊಂದಿದೆ. ಭಾರತ ಅನೇಕತೆಯಲ್ಲಿ ಏಕತೆ ಪರಿಪಾಲಿಸುತ್ತಿರುವ ರಾಷ್ಟ್ರ. ವಿಜ್ಞಾನ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ. ನಾವು ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಮುನ್ನೆಡೆದಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದ್ದಾರೆ. ಭೇಟಿ ಬಚಾವೋ, ಭೇಟಿ ಪಡಾವೋ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ರಾಜ್ಯ ಹಾಗೂ ದೇಶದಲ್ಲಿ ಒಳ್ಳೆಯ ಆಡಳಿತಕ್ಕಾಗಿ ಶ್ರಮಿಸೋಣ. ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು. ಆತಂಕವಾದ ತೊಲಗಿಸಲು ಸಮರ್ಥ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು ಪ್ರಗತಿಯ ಹಾದಿಯಲ್ಲಿ ಸಾಗಲು ನಾವೆಲ್ಲ ಕೈಜೋಡಿಸಿ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT