ದೇವೇಂದ್ರ ಫಡ್ನವಿಸ್ 
ಪ್ರಧಾನ ಸುದ್ದಿ

ವಿದರ್ಭದಲ್ಲಿ ರೈತರ ಆತ್ಮಹತ್ಯೆ, ಬಿಜೆಪಿಯನ್ನು ದೂಷಿಸಿದ ಶಿವಸೇನ

ವಿದರ್ಭದಲ್ಲಿ ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಮಹಾರಾಷ್ಟ್ರದ ಮುಖ್ಯಮಂತ್ರಿ

ಮುಂಬೈ: ವಿದರ್ಭದಲ್ಲಿ ಸಾಲದ ಬಾಧೆ ತಾಳಲಾರದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜ್ಯದಲ್ಲಿ ವ್ಯವಹಾರ ಕುದುರಿಸುವುದರಲ್ಲಿ ಹಾಗೂ ಹೂಡಿಕೆಯನ್ನು ಆಕರ್ಷಿಸುವುದರಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಶಿವಸೇನೆ ತನ್ನ ಮೈತ್ರಿ ಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಜನರ ನಿರೀಕ್ಷೆಯನ್ನು ತಲುಪುವುದಕ್ಕೆ ಬಿಜೆಪಿ ಪಕ್ಷ ಸೋತಿದೆ ಎಂದು ಸೇನೆ ಆರೋಪಿಸಿದೆ.

"ಹೊಸ ಮುಖ್ಯಮಂತ್ರಿ (ದೇವೇಂದ್ರ ಫಡ್ನವಿಸ್) ವಿದರ್ಭದವರಾಗಿದ್ದು ಆ ಭಾಗದ ರೈತರು ಹೊಸ ಜೀವನ ಪಡೆಯಲಿದ್ದಾರೆಂಬ ಭರವಸೆ ಹುಟ್ಟಿಸಿದ್ದರು. ಆದರೆ ಈಗ ಅದಕ್ಕೆ ವಿರುದ್ಧವಾದ ಕಾರ್ಯಗಳೇ ಜರುಗುತ್ತಿವೆ. ದಾವೋಸ್ ನಲ್ಲಿ ಹೂಡಿಕೆದಾರರಿಗೆ ಕೆಂಪು ಕಾರ್ಪೆಟ್ ಹಾಸುವುದರಲ್ಲಿ ಮುಖ್ಯಮಂತ್ರಿ ಬ್ಯುಸಿಯಾಗಿದ್ದಾರೆ, ಇಲ್ಲಿ ರೈತರಿಗೆ ಸಾಲ ಹಿಂದುರಿಗಿಸಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಘಟನೆಗಳು ಹೃದಯ ಹಿಂಡುತ್ತವೆ" ಎಂದು ಸೇನಾದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ