ಅರುಣ್‌ ಜೇಟ್ಲಿ 
ಪ್ರಧಾನ ಸುದ್ದಿ

ಕೃಷಿ ಸಿಂಚಯ್, ಆನ್‌ಲೈನ್‌ ಕೃಷಿ ಮಾರುಕಟ್ಟೆಗೆ ಕೇಂದ್ರ ಸಂಪುಟ ಅಸ್ತು

ನೀರಾವರಿಗೆ ಸಂಬಂಧಿಸಿದ 'ಪ್ರಧಾನಮಂತ್ರಿ ಕೃಷಿ ಸಿಂಚೈ' ಯೋಜನೆಗೆ ಹಾಗೂ ಆನ್‌ಲೈನ್‌ ಕೃಷಿ ಮಾರುಕಟ್ಟೆ ಆರಂಭಿಸಲು ಕೇಂದ್ರ ಸಚಿವ ಸಂಪುಟ...

ನವದೆಹಲಿ: ನೀರಾವರಿಗೆ ಸಂಬಂಧಿಸಿದ 'ಪ್ರಧಾನಮಂತ್ರಿ ಕೃಷಿ ಸಿಂಚಯ್' ಯೋಜನೆಗೆ ಹಾಗೂ ಆನ್‌ಲೈನ್‌ ಕೃಷಿ ಮಾರುಕಟ್ಟೆ ಆರಂಭಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು, ಪ್ರಧಾನಮಂತ್ರಿ ಕೃಷಿ ಸಿಂಚೈ ಯೋಜನೆ ಜಾರಿಗೆ ಹಾಗೂ ಆನ್‌ಲೈನ್‌ ಕೃಷಿ ಮಾರುಕಟ್ಟೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಸಂಬಂಧ ಎಲ್ಲಾ ರಾಜ್ಯಗಳಲ್ಲೂ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದರು.

ಕೃಷಿ ಸಿಂಚಯ್ ಯೋಜನೆಗಾಗಿ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರುಪಾಯಿ ವೆಚ್ಚ ಮಾಡಲಾಗುವುದು' ಎಂದು ಅರುಣ್  ಜೇಟ್ಲಿ ತಿಳಿಸಿದರು.

ಕೃಷಿಗೆ ಪ್ರೋತ್ಸಾಹ ,ಕೃಷಿ ನೀರಾವರಿಯನ್ನು ಗಮನದಲ್ಲಿರಿಸಿಕೊಂಡು ಈ ಯೋಜನೆ ರೂಪಿಸಲಾಗಿದ್ದು, ದೇಶದಲ್ಲಿ ಕೃಷಿ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಕೃಷಿ ಭೂಮಿಗಳಿಗೂ ನೀರಾವರಿ ಸೌಲಭ್ಯ ಒದಗಿಸುವ ಸಲುವಾಗಿ ಯೋಜನೆ ಆರಂಭಿಸಲಾಗಿದೆ ಎಂದರು.

ನಗರಗಳ ಕಲುಷಿತ ನೀರನ್ನು ಶುದ್ಧೀಕರಿಸಿ ಗ್ರಾಮಾಂತರ ಪ್ರದೇಶಗಳ ಕೃಷಿಗೆ ಒದಗಿಸುವುದು ಮತ್ತು ಜನರಲ್ಲಿ ನೀರಿನ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವೂ ಈ ಯೋಜನೆಯ ಅಡಿಯಲ್ಲಿ ಬರಲಿದೆ ಎಂದು ಹಣಕಾಸು ಸಚಿವರು ತಿಳಿಸಿದರು.

ಇನ್ನು ಆನ್‌ಲೈನ್ ಮಾರುಕಟ್ಟೆ ಸ್ಥಾಪಿಸುವ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರು, ದೇಶದಲ್ಲಿ ಈ ಯೋಜನೆಗೆ ಕರ್ನಾಟಕ ಮಾದರಿಯಾಗಿದ್ದು, ಕರ್ನಾಟಕ ಮಾದರಿಗೆ ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು. ಅಲ್ಲದೆ ಈ ಸಂಬಂಧ ಕರ್ನಾಟಕದ ಹುಬ್ಬಳಿಯಲ್ಲಿರುವ ಕೃಷಿ ಮಾರುಕಟ್ಟೆಗೆ ಭೇಟಿ ನೀಡಿ ಅಧ್ಯಯನ ನಡೆಸುವುದಾಗಿ ಎಂದು ತಿಳಿಸಿದರು.

ಜುಲೈ 9 ಮತ್ತು 10ರಂದು ಹುಬ್ಬಳಿಯ ಕೃಷಿ ಮಾರುಕಟ್ಟೆಗೆ ಭೇಟಿ ನೀಡುತ್ತೇನೆ. ಈ ವೇಳೆ ವಿವಿಧ ರಾಜ್ಯಗಳ ಕೃಷಿ ಇಲಾಖೆ ಅಧಿಕಾರಿಗಳು ಸಹ ಆಗಮಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!