ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ದನಗಳ್ಳ ಎಂದು ಶಂಕಿಸಿ ಒಬ್ಬನನ್ನು ಕೊಂದ ಜನರ ಗುಂಪು

ದನಗಳ್ಳ ಎಂದು ಶಂಕಿಸಿ ಒಬ್ಬನನ್ನು ಜನರ ಗುಂಪು ಕೊಂದು ಅವನ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಅಸ್ಸಾಮಿನ ಗೋಲಾಘಾಟ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ

ಸಾಂದರ್ಭಿಕ ಚಿತ್ರ
Guruprasad Narayana
Updated On : 6 Jul 2015, 11:39 am

ಗೌಹಾಟಿ: ದನಗಳ್ಳ ಎಂದು ಶಂಕಿಸಿ ಒಬ್ಬನನ್ನು ಜನರ ಗುಂಪು ಕೊಂದು ಅವನ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಅಸ್ಸಾಮಿನ ಗೋಲಾಘಾಟ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ೭೩ ನ್ನು ಈ ಗುಂಪು ತಡೆ ಹಾಕಿ, ಶಂಕಿತ ದನಗಳ್ಳನ ಸಹಚರರನ್ನು ಬಂಧಿಸಬೇಕೆಂದು ಪೊಲೀಸರನ್ನು ಆಗ್ರಹಿಸಿದೆ.

ಆರು ಹಸುಗಳನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಡ್ಡಿದ ಕೆಲವು ಪ್ರಾದೇಶಿಕ ನಿವಾಸಿಗಳು ನಡುರಾತ್ರಿ ಸುಮಾರು ೨ ಘಂಟೆಗೆ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಜನರು ಹಸುಗಳನ್ನು ಕೊಂದದ್ದಕ್ಕೆ ರಸೀದಿಯನ್ನು ತೋರಿಸುವಂತೆ ಕೇಳಿದ್ದಾರೆ. ರಸೀದಿಯನ್ನು ತೋರಿಸದಿದ್ದಕ್ಕೆ ಚಾಲಕನನ್ನು ಹಸುಗಳ್ಳ ಎಂದು ಶಂಕಿಸಿ ಜನರು ಅವನ ಮೇಲೆ ದಾಳಿ ಮಾಡಿದ ಪರಿಣಾಮವಾಗಿ ಅವನು ಮೃತಪಟ್ಟಿದ್ದಾನೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಮನುಷ್ಯನನ್ನು ಜುಂತಿ ಅಲಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments