ಪ್ರಧಾನ ಸುದ್ದಿ

ವಾಹನ ಸವಾರರೆ ಎಚ್ಚರ... ಇನ್ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದ್ರೆ ಜೈಲು ಗ್ಯಾರಂಟಿ!

Lingaraj Badiger

ಬೆಂಗಳೂರು: ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ ರಸ್ತೆಯಲ್ಲೇ ನಿಂತು ಜಗಳ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ರಸ್ತೆಯಲ್ಲಿ ಜಗಳ ಮಾಡುವವರ ವಿರುದ್ಧ ಐಪಿಸಿ ಸೆಕ್ಷನ್ 160ರ ಅಡಿ ಕೇಸ್ ದಾಖಲಿಸಲು ಅಥವಾ ದಂಡ ವಿಧಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಸಣ್ಣಪುಟ್ಟ ವಿಷಯಗಳಿಗೂ ಸಹ ಸವಾರರೊಂದಿಗೆ ಪರಸ್ಪರ ವಾಗ್ವಾದಕ್ಕೀಳಿದು ಬೇರೆಯವರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಸಲೀಂ ಅವರು ಹೇಳಿದ್ದಾರೆ.

ಇತ್ತೀಚಿಗೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿನ ಕಾದಾಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT